ಹೆಚ್‌ಡಿಕೆ ವಿರುದ್ಧ ಭೂಮಿ ಒತ್ತುವರಿ ಆರೋಪ | ಹೈಕೋರ್ಟ್‌ ಚಾಟಿ ಬೆನ್ನಲ್ಲೇ ಜಮೀನು ಸರ್ವೆ ಆರಂಭ

Date:

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಸಂಬಂಧಿಕರ ವಿರುದ್ಧ ಕೇಳಿಬಂದಿರುವ ಸರ್ಕಾರಿ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಡದಿಯ ಕೇತಗಾನಹಳ್ಳಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿದ್ದಾರೆ.

ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್‌ ಪ್ರಕಾಶ್ ಮತ್ತು ವಿ ಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೆ ನಂಬರ್ಗಳ ಜಮೀನು ಪರಿಶೀಲನೆ ಮಾಡಲಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಕಂದಾಯ ಇಲಾಖೆಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ಕಾರ್ಯ ಆರಂಭವಾಗಿದೆ.

ಹೆಚ್‌ ಡಿ ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಕಂದಾಯ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ಕೇತಗಾನಹಳ್ಳಿಯಲ್ಲಿ ಕೇಂದ್ರ ಮಂತ್ರಿ ಕುಮಾರಸ್ವಾಮಿ 14 ಎಕರೆ ಭೂಮಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಆರೋಪ ಕುರಿತಂತೆ ವರದಿ ನೀಡಲು ವಿಳಂಬ ಮಾಡಿದ ದೂರಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತರನ್ನು ಕೋರ್ಟ್‌ಗೆ ಕರೆಯಿಸಿಕೊಂಡು ಸರ್ಕಾರಕ್ಕೆ ಚಾಟಿ ಬೀಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭೂ ಕಬಳಿಕೆ | ಕುಮಾರಸ್ವಾಮಿ ಮತ್ತು ಸಂಬಂಧಿಕರ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗುವುದೇ?

ಹೆಚ್‌ ಡಿ ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮಣ್ಣ  ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಮೊದಲು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಲಾಗಿತ್ತು. ಲೋಕಾಯುಕ್ತರ ಆದೇಶವನ್ನು ಇತ್ತೀಚೆಗೆ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಬಳಿಕ ಕ್ರಮ ಕೈಗೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...