ದಲಿತರ ಅನುದಾನ ದುರ್ಬಳಕೆ ಆರೋಪ; ರಾಜ್ಯಾದ್ಯಂತ ನಾಳೆ (ಫೆ.23) ಪ್ರತಿಭಟನೆಗೆ ಬಿಜೆಪಿ ಕರೆ

Date:

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮಂಜೂರಾದ ರೂ. 11,144 ಕೋಟಿ ಅನುದಾನವನ್ನು ಬೇರೆ ಕಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ನಾಳೆ (ಫೆ.23) ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕರೆ ಅನ್ವಯ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ.ರಾಜೀವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ದಲಿತರಿಗೆ ಈ ಹಿಂದೆ ಬಿಜೆಪಿ ಸರಕಾರ ಜಾರಿಗೊಳಿಸಿದ್ದ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಯನ್ನು ರದ್ದು ಮಾಡಲಾಗಿದೆ. ಇದು ಖಂಡನೀಯ. ಎಸ್‍ಸಿ, ಎಸ್‍ಟಿ ಸಮುದಾಯದ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...