ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ | ದುಷ್ಟ ಶಕ್ತಿಗಳನ್ನು ಸರ್ಕಾರ ಸೆದೆ ಬಡಿಯಬೇಕು: ಡಿ ಕೆ ಸುರೇಶ್

Date:

ಬಿಜೆಪಿ ಶಾಸಕ ಮುನಿರತ್ನ ಅವರದ್ದು ಅಸಹ್ಯಕರ ಬೆಳವಣಿಗೆ. ಇಂತಹ ದುಷ್ಟ ಶಕ್ತಿಗಳನ್ನು ಸೆದೆ ಬಡಿಯಬೇಕು ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಆಕ್ರೋಶ ವ್ತಕ್ತಪಡಿಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, “ಮುನಿರತ್ನ ರೇಪ್ ಕೇಸ್ ವಿಚಾರ ನನಗೆ ಮಾಧ್ಯಮದ ಮೂಲಕ ತಿಳಿದಿದೆ. ಈ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿ ಕಲೆ ಹಾಕಿ ನಾನು‌ ಮಾತನಾಡುವೆ” ಎಂದು ಹೇಳಿದರು.

“ಮುನಿರತ್ನನ ಇಂತಹ ಕೃತ್ಯಗಳನ್ನು ನೋಡಿದರೆ ಆಶ್ಚರ್ಯ ಹಾಗೂ ಆತಂಕವಾಗುತ್ತಿದೆ. ಇಂತಹ ಆಲೋಚನೆ ಸಾಮಾನ್ಯ ವ್ಯಕ್ತಿಗೆ ಬರಲ್ಲ. ಕ್ರಿಮಿನಲ್ ವ್ಯಕ್ತಿಗಳಿಗೆ ಮಾತ್ರ ಬರುತ್ತದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಮೇಲೆ ಗೂಬೆ ಕೂರಿಸಲು ಆರ್ ಅಶೋಕ್ ಮೇಲೆ ಯಾವ ರೀತಿ ಅವರು ಪದ ಬಳಕೆ ಮಾಡಿದ್ದಾರೆಂದು ಗೊತ್ತಿದೆ. ಇವತ್ತು ಒಕ್ಕಲಿಗ ಸಮಾಜ ಎಲ್ಲವನ್ನೂ ಗಮನಿಸುತ್ತಿದೆ. ಅವರ ಋಣದಲ್ಲಿ ಒಕ್ಕಲಿಗರು ಇಲ್ಲ, ಒಕ್ಕಲಿಗರ ಮೇಲೆ ಅವರು ನಿಂತಿದ್ದಾರೆ. ಬಿಜೆಪಿಯವರು ಮಾಡೋದೆಲ್ಲ ಮಾಡ್ತಾರೆ, ಆ ಮೇಲೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ” ಎಂದು ಕಿಡಿಕಾರಿದರು.

“ಮುನಿರತ್ನ ಪ್ರಕರಣದ ವಿಚಾರವಾಗಿ ಒಕ್ಕಲಿಗ ಸಮಾಜದ ಪ್ರಮುಖರ ಸಭೆಯಲ್ಲಿ ನಾನು ಭಾಗವಹಿಸುತ್ತಿರುವೆ. ಈ ರೀತಿಯ ಹೇಳಿಕೆ ವಿರುದ್ಧ ಏನು ಮಾಡಬೇಕೆಂದು ಚರ್ಚೆ ಮಾಡಬೇಕಿದೆ. ಹೀಗೆ ಬಿಟ್ಟರೆ ನಾಳೆ ಇನ್ನೊಬ್ಬರು ಮಾತಾಡೋಕೆ ಶುರು ಮಾಡ್ತಾರೆ. ಅವರ ಹೆಣ್ಣು ಮಕ್ಕಳ ಬಗ್ಗೆ ಮಾತಾಡಿದ್ರೆ ಬಿಜೆಪಿ ವರು ಸಹಿಸಿಕೊಳ್ಳಬಹುದು. ನಾನು ನನ್ನ ರಾಜಕೀಯ ಜೀವನದಲ್ಲೇ ಇಂತಹ ಪದಗಳನ್ನು ಕೇಳೇ ಇಲ್ಲ” ಎಂದು ಡಿ ಕೆ ಸುರೇಶ್‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...