ಪಾಕ್‌ ಪರ ಘೋಷಣೆ ಆರೋಪ | ಎಲ್ಲ ದೃಶ್ಯಗಳನ್ನೂ ಪಡೆದು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದೇವೆ: ಸಚಿವ ಪರಮೇಶ್ವರ್‌

Date:

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ ಎಫ್‍ಎಸ್‍ಎಲ್ ವರದಿ ಸರ್ಕಾರದ ಕೈ ಸೇರಿಲ್ಲ. ಆದಷ್ಟು ಬೇಗ ವರದಿ ನೀಡುವಂತೆ ಪ್ರಯೋಗಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಂದು ಮಾಧ್ಯಮದಲ್ಲಿ ಪ್ರಸಾರವಾದ ದೃಶ್ಯ ಅಥವಾ ಒಂದು ಕ್ಲಿಪ್ಪಿಂಗ್‍ಗೆ ಸಂಬಂಧಿಸಿದಂತೆ ತನಿಖೆ ಸೀಮಿತವಾಗುವುದಿಲ್ಲ. ಇರುವ ಎಲ್ಲಾ ದೃಶ್ಯಗಳನ್ನೂ ಪಡೆದುಕೊಂಡು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದೇವೆ” ಎಂದರು.

“ಈಗಾಗಲೇ 7 ಜನರನ್ನು ಕರೆಸಿ, ಹೇಳಿಕೆ ಪಡೆದು, ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದೇವೆ. ಪ್ರಯೋಗಾಲಯದ ವರದಿ ಬಂದ ಬಳಿಕ ಧ್ವನಿ ಮಾದರಿಗಳನ್ನು ಹೋಲಿಕೆ ಮಾಡಲಾಗುತ್ತದೆ. ಶಂಕೆ ಇರುವವರ ಧ್ವನಿ ಮಾದರಿಗಳನ್ನೂ ಸಂಗ್ರಹಿಸಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪಾಕ್‌ ಪರ ಘೋಷಣೆ ಆರೋಪ | ವಿಚಾರಣೆಗೆ 26 ಮಂದಿಯ ಪಟ್ಟಿ ತಯಾರು, 8 ಜನರ ವಿಚಾರಣೆ

ಸಂಪುಟ ಸಭೆಯಲ್ಲಿ ತೀರ್ಮಾನ 

“ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದೆ. ಅದರ ಕುರಿತು ಸಂಪುಟದಲ್ಲಿ ಔಪಚಾರಿಕ ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಸವಿಸ್ತಾರವಾದ ಚರ್ಚೆ ನಡೆಸಲಾಗುವುದು” ಎಂದರು.

“ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿಗೆ ಸಂಬಂಧಿಸಿದಂತೆ ಸಂಪುಟ ತೆಗೆದುಕೊಳ್ಳುವ ನಿರ್ಧಾರದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ಸಭೆಯಲ್ಲಿ ತಿಳಿಸಿದ್ದಾರೆ” ಎಂದು ತಿಳಿಸಿದರು.

“ವರದಿಯನ್ನು ಉಭಯ ಸದನಗಳಲ್ಲಿ ಮಂಡಿಸಬೇಕೇ ಅಥವಾ ಸರ್ಕಾರವೇ ನೇರವಾಗಿಯೇ ವರದಿಯನ್ನು ಬಹಿರಂಗ ಪಡಿಸಬೇಕೇ ಎಂಬುದನ್ನು ಸಂಪುಟ ನಿರ್ಧರಿಸಬೇಕಾಗುತ್ತದೆ. ಎಲ್ಲಾ ಸಚಿವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ” ಎಂದು ಪರಮೇಶ್ವರ್ ಹೇಳಿದರು.

“ಸರ್ಕಾರ ಸ್ವೀಕರಿಸಿರುವ ವರದಿ ಕಾಂತರಾಜ ಅಥವಾ ಜಯಪ್ರಕಾಶ್ ಹೆಗ್ಡೆ ವರದಿಯೆಂದಾಗುವುದಿಲ್ಲ. ಅದು ಹಿಂದುಳಿದ ವರ್ಗಗಳ ಆಯೋಗದ ವರದಿ ಮಾತ್ರ” ಎಂದು ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...