ಇಂಡಿಯಾ ಕೂಟ | ರಾಷ್ಟ್ರೀಯ ಚುನಾವಣೆಗೆ ಮೈತ್ರಿ – ಸ್ಥಳೀಯ ಚುನಾವಣೆಗೆ ಪ್ರತಿಸ್ಪರ್ಧಿ!

Date:

ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್‌ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ. ಮಹಾರಾಷ್ಟ್ರದ ಮುಂಬೈನಲ್ಲಿ ನಡೆಯಲಿರುವ ಮುಂಬೈ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಶಿವಸೇನೆ (ಉದ್ದವ್ ಬಣ) ಘೋಷಿಸಿದೆ. ಇದೆಲ್ಲವೂ, ಇಂಡಿಯಾ ಮೈತ್ರಿಯಲ್ಲಿ ಬಿರುಕು ಮೂಡಿದೆ ಎಂಬುದನ್ನು ಸೂಚಿಸುತ್ತಿದೆ.

ಈ ನಡುವೆ, ಮುಂಬೈ ಪಾಲಿಕೆ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿರುವ ಎನ್‌ಸಿಪಿ (ಶರದ್‌ ಬಣ) ನಾಯಕ ಶರದ್ ಪವಾರ್, “ಇಂಡಿಯಾ ಬಣವನ್ನು ರಾಷ್ಟ್ರೀಯ ಮಟ್ಟದ ಚುನಾವಣೆಗಳಿಗಾಗಿ ಮಾತ್ರ ರಚಿಸಲಾಗಿದೆ. ಪುರಸಭೆ ಅಥವಾ ರಾಜ್ಯ ಚುನಾವಣೆಗಳಲ್ಲಿ ಒಟ್ಟಿಗೆ ಸ್ಪರ್ಧೆ ಮಾಡುವ ಬಗ್ಗೆ ಏನೂ ಚರ್ಚಿಸಲಾಗಿಲ್ಲ” ಎಂದಿದ್ದಾರೆ. ಆ ಮೂಲಕ ಮುಂಬೈ ಸ್ಥಳೀಯ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಸುಳಿವು ನೀಡಿದ್ದಾರೆ.

“ಇಂಡಿಯಾ ರಂಗ ರಚನೆಯಾದಾಗ, ಚರ್ಚೆ ರಾಷ್ಟ್ರೀಯ ಸಮಸ್ಯೆಗಳು ಮತ್ತು ಚುನಾವಣೆಗಳ ಬಗ್ಗೆ ಮಾತ್ರ. ಸ್ಥಳೀಯ ಸಂಸ್ಥೆ ಚುನಾವಣೆ ಅಥವಾ ರಾಜ್ಯ ಚುನಾವಣೆಗಳ ಬಗ್ಗೆ ಯಾವುದೇ ಚರ್ಚೆ ಇರಲಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷಗಳು ಒಟ್ಟಾಗಿ ಅಥವಾ ಏಕಾಂಗಿಯಾಗಿ ಸ್ಪರ್ಧಿಸುತ್ತವೆಯೇ ಎಂದು ನಿರ್ಧರಿಸಲು ಎಂವಿಎ ಸಭೆ ನಡೆಸಲಾಗುವುದು” ಎಂದು ಶರದ್ ಪವಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾರಾಷ್ಟ್ರದಲ್ಲಿ ಮುಂಬರುವ ಪುರಸಭೆ ಚುನಾವಣೆಯಲ್ಲಿ, ನಾವು ಒಟ್ಟಾಗಿ ಅಥವಾ ಏಕಾಂಗಿಯಾಗಿ ಹೋರಾಡುತ್ತೇವೆಯೇ ಎಂಬುದರ ಬಗ್ಗೆ 8-10 ದಿನಗಳಲ್ಲಿ ಸಭೆ ನಡೆಸಿ, ನಿರ್ಧರಿಸುತ್ತೇವೆ. ಮೈತ್ರಿಕೂಟದೊಳಗೆ ನಮಗೆ ಸಂವಹನವಿದೆ” ಎಂದಿದ್ದಾರೆ.

ಪವಾರ್ ಅವರ ಈ ಹೇಳಿಕೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯು ಒಡೆಯುತ್ತಿದೆ ಎಂಬ ವದಂತಿಗಳಿಗೆ ಮತ್ತಷ್ಟು ಬಲ ತುಂಬಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...