ಬಿಜೆಪಿಯೊಂದಿಗೆ ಮೈತ್ರಿ: ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿದ ಮುಸ್ಲಿಂ ಮುಖಂಡರು

Date:

  • ಬೆಂಗಳೂರಿನಲ್ಲಿ ಸಭೆ ನಡೆಸಿದ ಜೆಡಿಎಸ್ ಪಕ್ಷದ ಮುಸ್ಲಿಂ ಮುಖಂಡರು
  • ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಜೆಡಿಎಸ್

ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎನ್‌ಡಿಎ ಜತೆ ಮೈತ್ರಿ ಅಧಿಕೃತವಾಗುತ್ತಿದ್ದಂತೆ ಜೆಡಿಎಸ್‌ನ ಕೆಲವು ಮುಸ್ಲಿಂ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷವನ್ನು ತೊರೆಯುವ ತೀರ್ಮಾನ ಕೈಗೊಂಡಿದ್ದಾರೆ.

ಪಕ್ಷದ ಹಿರಿಯ ರಾಜ್ಯ ಉಪಾಧ್ಯಕ್ಷ ಸಯ್ಯದ್‌ ಶಫೀವುಲ್ಲಾ ಅವರು ಪಕ್ಷದಲ್ಲಿನ ಎಲ್ಲ ಹುದ್ದೆಗಳಿಗೆ ಮತ್ತು ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇನ್ನುಳಿದಂತೆ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎನ್‌.ಎಂ.ನಬಿ, ರಾಜ್ಯ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ನಾಸೀರ್‌ ಹುಸೇನ್‌, ಯುವ ಘಟಕದ ಕಾರ್ಯಾಧ್ಯಕ್ಷ ಎನ್‌.ಎಂ.ನೂರ್‌, ಮುಖಂಡರಾದ ಮೊಹಿದ್‌ ಅಲ್ತಾಫ್‌ ಸಹ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಅಧಿಕೃತವಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಕೃಪಾದಲ್ಲಿ ಸಭೆ ನಡೆಸಿದ ಜೆಡಿಎಸ್ ಪಕ್ಷದ ಮುಸ್ಲಿಂ ಮುಖಂಡರು, ಪಕ್ಷದಿಂದ ದೂರವುಳಿದು, ರಾಜೀನಾಮೆ ನೀಡುವ ಬಗ್ಗೆ ತೀರ್ಮಾನಿಸಿದ್ದಾರೆ.

ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮೈತ್ರಿ ಪ್ರಕ್ರಿಯೆ ಅಧಿಕೃತಗೊಳಿಸಿರುವುದನ್ನು ಖಂಡಿಸಿರುವ ಮುಖಂಡರುಗಳು, ಪಕ್ಷದ ವರಿಷ್ಠರ ನಡೆ ಪಕ್ಷಕ್ಕೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಭಿಪ್ರಾಯಿಸಿದ್ದು, ಮೈತ್ರಿಯ ನಡೆಯನ್ನು ವಿರೋಧಿಸಿದರು.

ಸಯ್ಯದ್‌ ಶಫೀವುಲ್ಲಾ ಅವರು ಪಕ್ಷದ ಹಿರಿಯ ರಾಜ್ಯ ಉಪಾಧ್ಯಕ್ಷ ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಗೆ ಮತ್ತು ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರಿಗೆ ಪತ್ರ ಬರೆದು ರಾಜೀನಾಮೆ ಪತ್ರ ರವಾನಿಸಿದ್ದಾರೆ.

“ಬಿಜೆಪಿ ಜತೆಗಿನ ಮೈತ್ರಿಗೆ ಈ ಮೊದಲೇ ವಿರೋಧ ವ್ಯಕ್ತಪಡಿಸಿದ್ದೆವು. ಆದರೂ ಬಿಜೆಪಿ ಜತೆ ಕೈ ಜೋಡಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ನಮ್ಮ ವಿರೋಧ ಇರುವ ಕಾರಣ ಪಕ್ಷವನ್ನು ತೊರೆಯಲು ಹಲವು ಮುಖಂಡರು ತೀರ್ಮಾನಿಸಿದ್ದಾರೆ” ಎಂದು ಸಯ್ಯದ್‌ ಶಫೀವುಲ್ಲಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...