ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು, ಮೋದಿ ಪ್ರಧಾನಿಯಾಗಿದ್ದು: ಸಿದ್ದರಾಮಯ್ಯ

Date:

ಬ್ರಿಟಿಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು ನಮ್ಮ ನಡಿಗೆ ಸಂವಿಧಾನದ ಕಡೆಗೆ ಅಭಿಯಾನ ಉದ್ಘಾಟಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ, ಸನ್ಮಾನಿಸಿ ಮಾತನಾಡಿದರು.

“ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ಅವರು ಈ ರೀತಿಯ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿಯವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು” ಎಂದು ಹೇಳಿದರು.

“ಸಾವಿರಾರು ವರ್ಷಗಳದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ” ಎಂದರು.

“ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ” ಎಂದರು.

“ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ” ಎಂದು ಹೇಳಿದರು.

ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...