ಬಿಜೆಪಿ ತಂದಿದ್ದ ರೈತ ವಿರೋಧಿ ʼಭೂ ಸುಧಾರಣಾ ಕಾಯ್ದೆ 2020ʼಕ್ಕೆ ತಿದ್ದುಪಡಿ: ಸಿದ್ದರಾಮಯ್ಯ ಭರವಸೆ

Date:

ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

“ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್‌ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಾರ್ಗದರ್ಶನ ನನಗೆ ಅನುಕೂಲವಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...