ಬಿಹಾರ ಚುನಾವಣೆ | ಪಕ್ಷ ವಿರೋಧಿ ಚಟುವಟಿಕೆ: ಮಾಜಿ ಸಚಿವ ಸೇರಿ 11 ನಾಯಕರ ಉಚ್ಚಾಟಿಸಿದ ಜೆಡಿಯು

Date:

ಬಿಹಾರ ಚುನಾವಣೆಗೆ ಇನ್ನು ಕೆಲವೇ ವಾರಗಳಿವೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ ಜೆಡಿಯು ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಸೇರಿ ಒಟ್ಟು 11 ನಾಯಕರುಗಳನ್ನು ಪಕ್ಷದಿಂದ ಉಚ್ಚಾಟಿಸಿದೆ.

ಈ ಉಚ್ಚಾಟಿತರು ಜೆಡಿಯುನ ಪ್ರಾಥಮಿಕ ಸದಸ್ಯತ್ವವನ್ನೂ ಕಳೆದುಕೊಂಡಿದ್ದಾರೆ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಚಂದನ್ ಕುಮಾರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಶನಿವಾರ ಸಂಜೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂದು ಕಂಡುಬಂದ ನಂತರ 11 ನಾಯಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಸಾರ್ವಜನಿಕ ಸಭೆ ಆಯೋಜಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ಶೈಲೇಶ್ ಕುಮಾರ್, ಮಾಜಿ ಶಾಸಕರಾದ ಶ್ಯಾಮ್ ಬಹದ್ದೂರ್ ಸಿಂಗ್ ಮತ್ತು ಸುದರ್ಶನ್ ಕುಮಾರ್, ಮಾಜಿ ಎಂಎಲ್‌ಸಿಗಳಾದ ಸಂಜಯ್ ಪ್ರಸಾದ್ ಮತ್ತು ರಣವಿಜಯ್ ಸಿಂಗ್ ಉಚ್ಚಾಟಿತರಾದವರು.

ಈ ಉಚ್ಚಾಟಿತ ನಾಯಕರು ಪಕ್ಷದ ಅಧಿಕೃತವಾಗಿ ಘೋಷಿಸಲಾದ ಅಭ್ಯರ್ಥಿಗಳು ಮತ್ತು ಇತರ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡುತ್ತಿದ್ದರು. ಅವರು ಸಿದ್ಧಾಂತವನ್ನು ಧಿಕ್ಕರಿಸುತ್ತಿದ್ದರು ಎಂದು ಹೇಳಲಾಗಿದೆ.

243 ಸದಸ್ಯರ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...