ಹಿಂದಿ ಹೇರಿಕೆ | ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ: ಉದಯನಿಧಿ ಸ್ಟ್ಯಾಲಿನ್ ಘೋಷಣೆ

Date:

ಕೇಂದ್ರದ ತ್ರಿಭಾಷಾ ನೀತಿ ಮತ್ತು ಹಿಂದಿ ಹೇರಿಕೆ ವಿಚಾರದಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಿಜೆಪಿ ನಡುವೆ ವಾಕ್ಸಮರ ಏರ್ಪಟ್ಟಿದೆ. “ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ” ಎಂದು ಉದಯನಿಧಿ ಸ್ಟ್ಯಾಲಿನ್ ಘೋಷಿಸಿದ್ದಾರೆ. ಹಾಗೆಯೇ “ಹಿಂದಿಯನ್ನು ಒಪ್ಪಿಕೊಳ್ಳುವ ರಾಜ್ಯಗಳು ತಮ್ಮ ಮಾತೃಭಾಷೆಯನ್ನು ಕಳೆದುಕೊಳ್ಳಲಿದೆ” ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಇತ್ತೀಚೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸದಿದ್ದರೆ ಸಮಗ್ರ ಶಿಕ್ಷ ಮಿಷನ್‌ಗೆ 2,400 ರೂಪಾಯಿ ನಿಧಿಯನ್ನು ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಕೇಂದ್ರ ಸಚಿವರ ಈ ಬೆದರಿಕೆಗೂ ತಮಿಳುನಾಡು ನಾಯಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ʼಹಿಂದಿ ಹೇರಿಕೆʼ ಎಂಬುದು ಕೇವಲ ರಾಜಕೀಯ ದೊಂಬರಾಟವೇ?; ಕನ್ನಡಪರ ಹೋರಾಟಗಾರರ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ನಮ್ಮ ಹಣವನ್ನು ಕೇಳುತ್ತಿದ್ದೇವೆ. ನಮಗೆ ನೀಡಬೇಕಾದ ಬಾಕಿ ಹಣವನ್ನು ಕೇಳುತ್ತಿದ್ದೇವೆ. ಅದು ನಮ್ಮ ಹಕ್ಕಿನ ಹಣ. ಧರ್ಮೇಂದ್ರ ಪ್ರಧಾನ್ ಅವರು ತ್ರಿಭಾಷಾ ನೀತಿಯನ್ನು ಒಪ್ಪಿಕೊಂಡರೆ ಮಾತ್ರ ನಿಧಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ನಾವು ನಿಮ್ಮ ತಂದೆಯ ಹಣವನ್ನು ಕೇಳುತ್ತಿಲ್ಲ. ನಾವು ಭಿಕ್ಷೆ ಬೇಡುತ್ತಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ತಮಿಳುನಾಡಿನಲ್ಲಿ ದ್ವಿಭಾಷಾ ನೀತಿಯ ಜಾರಿಯಲ್ಲಿದೆ. ಶಿಕ್ಷಕರು ತಮಿಳು ಮತ್ತು ಇಂಗ್ಲೀಷ್ ಭಾಷೆಯನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತಾರೆ. ಹಾಗೆಯೇ 1930 ಮತ್ತು 1960ರಲ್ಲಿ ತಮಿಳುನಾಡು ಹಿಂದಿ ವಿರೋಧಿ ಆಂದೋಳನಕ್ಕೆ ಸಾಕ್ಷಿಯಾಗಿದೆ. ಇಂದಿಗೂ ಸ್ಥಳೀಯ ಭಾಷೆಗಳು ನಾಶವಾಗುತ್ತಿರುವ ನಡುವೆ ತಮಿಳುನಾಡು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ತೀವ್ರವಾಗಿ ಖಂಡಿಸುತ್ತಾ ಬಂದಿದೆ.

ಇನ್ನು ತಮಿಳುನಾಡು ಮಾತ್ರವಲ್ಲ. ಹಲವು ದಕ್ಷಿಣ ಭಾರತದ ರಾಜ್ಯಗಳು ಹಿಂದಿ ಹೇರಿಕೆಯನ್ನು ವಿರೋಧಿಸಿದೆ. ಕರ್ನಾಟಕ, ಕೇರಳ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ, ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಲಾಗುತ್ತಿದೆ. ಈ ನಡುವೆ ಈವರೆಗೆ ರಾಜ್ಯಕ್ಕೆ ನೀಡಬೇಕಾದ ನಿಧಿಯನ್ನು ಬಾಕಿಯಿರಿಸಿರುವ ಕೇಂದ್ರ ಸರ್ಕಾರ ಈ ಅವೈಜ್ಞಾನಿಕ ಶಿಕ್ಷಣ ನೀತಿ ಜಾರಿ ಮಾಡಿದರಷ್ಟೇ ನಿಧಿ ಬಿಡುಗಡೆ ಮಾಡಲಾಗುವುದು ಎಂಬ ‘ಬ್ಲ್ಯಾಕ್‌ಮೇಲ್’ ಮಾಡುತ್ತಿರುವುದು ಖಂಡನೀಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...