ಪ್ರಧಾನಿ ನರೇಂದ್ರ ಮೋದಿ ನಿಂದನೆ ಆರೋಪ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ

Date:

ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮತದಾರ ಅಧಿಕಾರ ಯಾತ್ರೆ’ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರ ವಿರುದ್ಧ ಶುಕ್ರವಾರ ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.

ಉಭಯ ಪಕ್ಷಗಳ ಕಾರ್ಯಕರ್ತರು ಬಾವುಟದ ಕೋಲುಗಳಿಂದ ಹೊಡೆದಾಡಿಕೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಬಿಜೆಪಿ ನಾಯಕರಲ್ಲಿ ಒಬ್ಬರಾದ ನಿತಿನ್ ನಬಿನ್, ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡುವುದಾಗಿ ಹೇಳಿದ್ದಾರೆ. “ತಾಯಿಯನ್ನು ಅವಮಾನಿಸಿದ್ದಕ್ಕಾಗಿ ಬಿಹಾರದ ಪ್ರತಿಯೊಬ್ಬ ಮಗ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡುತ್ತಾರೆ. ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ನರೇಂದ್ರ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದ ಕಾಲ್ತುಳಿತ: ಕಾಂಗ್ರೆಸ್ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಯಾಗಿ ಈ ಘಟನೆಯಲ್ಲಿ ಆಡಳಿತ ಪಕ್ಷವು ಭಾಗಿಯಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. “ತಕ್ಕ ಉತ್ತರ ನೀಡಲಾಗುವುದು. ಇದು ಸರ್ಕಾರದ ಭಾಗಿಯಾಗುವಿಕೆಯೊಂದಿಗೆ ನಡೆಯುತ್ತಿದೆ. ನಿತೀಶ್ ಕುಮಾರ್ ತಪ್ಪು ಮಾಡುತ್ತಿದ್ದಾರೆ” ಎಂದು ಕಾಂಗ್ರೆಸ್ ಕಾರ್ಯಕರ್ತ ಡಾ. ಅಶುತೋಷ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಮತದಾರರ ಕಳ್ಳತನದ ವಿರುದ್ಧವಾಗಿ ನಡೆಯುತ್ತಿರುವ ನಿರಂತರ ಕಾರ್ಯಕ್ರಮಗಳ ಸಂದರ್ಭದಲ್ಲಿ ವೇದಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಹಿಂದಿಯಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂಬ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬೆನ್ನಲ್ಲೆ ಪ್ರಕರಣ ದಾಖಲಿಸಿಕೊಂಡಿರುವ ಬಿಜೆಪಿ ಕಾಂಗ್ರೆಸ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣವೂ ದಾಖಲಾಗಿದೆ.

ಇದಕ್ಕೂ ಮುನ್ನವೇ ಪ್ರಧಾನಿ ಮೋದಿ ಅವರನ್ನು ನಿಂದಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದರ್ಭಾಂಗಾ ಪೊಲೀಸರು ತಿಳಿಸಿದ್ದಾರೆ. ಸಿಮ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಕ್ಸ್‌ನಲ್ಲಿ ದರ್ಭಾಂಗಾ ಪೊಲೀಸರು ಪೋಸ್ಟ್ ಮಾಡಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ವಿಚಾರದಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಘಟನೆಯನ್ನು ಅಲ್ಲಗಳೆದಿದ್ದಾರೆ. ನಿಜವಾದ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಂತಹ ವಿಷಯಗಳನ್ನು ಹಬ್ಬುತ್ತಿದೆ ಎಂದು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...