ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ: ಸಿದ್ದರಾಮಯ್ಯ ಪ್ರಶ್ನೆ

Date:

ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ?” ಎಂದು ಕಿಡಿಕಾರಿದ್ದಾರೆ.

“ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್ ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನ ನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾತಿನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?” ಎಂದು ಹರಿಹಾಯ್ದಿದ್ದಾರೆ.

“ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತಿನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ?” ಎಂದು ಕುಟುಕಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ” ಎಂದು ಸಿಎಂ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...