ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ; ಅಮಿತ್‌ ಶಾಗೆ ಬಹಿರಂಗ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Date:

ಗೃಹಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಡಾ.ಬಿ ಆರ್ ಅಂಬೇಡ್ಕ‌ರ್ ಕುರಿತು ಆಡಿದ ಮಾತುಗಳು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದೆ. ಬಿಜೆಪಿಯು ಭಾರತೀಯ ಸಂವಿಧಾನ ಶಿಲ್ಪಿಯ ಬಗ್ಗೆ ಅಸಡ್ಡೆಯನ್ನು ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತನ್ನ ಭಾಷಣದಲ್ಲಿ ಅಮಿತ್ ಶಾ, “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಎನ್ನುವುದು ಈಗ ಒಂದು ಫ್ಯಾಷನ್ ಆಗಿಬಿಟ್ಟಿದೆ. ನೀವು ಇಷ್ಟು ಸಲ ದೇವರ ಹೆಸರು ತೆಗೆದುಕೊಂಡಿದ್ದರೆ, ಏಳೇಳು ಜನ್ಮಗಳಲ್ಲೂ ಸ್ವರ್ಗ ಪ್ರಾಪ್ತಿಯಾಗುತಿತ್ತು” ಎಂದು ಹೇಳಿದ್ದರು. ಈ ಹೇಳಿಕೆಯನ್ನು ‘ಅಸಹ್ಯಕರ’ ಎಂದು ಬಣ್ಣಿಸಿರುವ ಕಾಂಗ್ರೆಸ್, ಗೃಹಸಚಿವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.‌

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗ ಪತ್ರವನ್ನೇ ಬರೆದು ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಪತ್ರದಲ್ಲಿ ಏನಿದೆ

ಸನ್ಮಾನ್ಯ ಅಮಿತ್ ಶಾ ಅವರೇ,

ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ.

ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ದಾರ್ಷ್ಟ್ಯಕ್ಕೆ ಶಹಭಾಸ್ ಅನ್ನಲೇಬೇಕು.

ಅಮಿತ್ ಶಹಾ ಅವರೇ, “ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ’’ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ.

ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ.

ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವಿವಾದಾತ್ಮಕ ಹೇಳಿಕೆ; ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ.

ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ.

ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ.

ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು.

ವಿಶ್ವಾಸಪೂರ್ವಕವಾಗಿ….

ಇಂತಿ,
ಸಿದ್ದರಾಮಯ್ಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...