ಚಾಮುಂಡಿ ಸನ್ನಿಧಿಯಲ್ಲಿ ಪಾದರಕ್ಷೆ ಧರಿಸಿ ಫೋಟೋಗೆ ಪೋಸ್ ನೀಡಿದ ಅಮಿತ್ ಶಾ

Date:

  • ಮೈಸೂರು ಭಾಗದ ಬಿಜೆಪಿ ಪ್ರಚಾರ ಯಾತ್ರೆಗೆ ಬಂದಿದ್ದ ಅಮಿತ್ ಶಾ
  • ಚಾಮುಂಡಿ ಸನ್ನಿಧಾನದಲ್ಲಿ ಶೂ ಧರಿಸಿ ಓಡಾಡಿದ ಕೇಂದ್ರ ಗೃಹ ಸಚಿವ

ಚಾಮುಂಡಿ ಸನ್ನಿಧಿಯಲ್ಲಿನ ಅನಾದಿ ಕಾಲದ ಸಂಪ್ರದಾಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಧಕ್ಕೆ ತಂದಿರುವ ಆರೋಪ ಅವರ ಹೆಗಲೇರಿದೆ.

ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಹೊರಡುವ ವೇಳೆ ದೇವಳದ ಮುಖ್ಯದ್ವಾರದ ಬಳಿ ದೇವಸ್ಥಾನದ ಅರ್ಚಕರು ಹಾಗೂ ಮೈಸೂರಿನ ಜನಪ್ರತಿಗಳ ಜೊತೆ ಅಮಿತ್ ಶಾ ಫೋಟೋ ತೆಗೆಸಿಕೊಂಡಿದ್ದಾರೆ.

ಈ ವೇಳೆ ಅವರು ಶೂ ಧರಿಸಿ ಪೋಟೋಗೆ ಪೋಸು ನೀಡಿರುವುದು, ಚಾಮುಂಡೇಶ್ವರಿಯ ಭಕ್ತರನ್ನು ಕೆರಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೊತೆಯಲ್ಲಿದ್ದ ಸಂಸದರು, ಶಾಸಕರು ಹಾಗೂ ಭದ್ರತಾ ಸಿಬ್ಬಂದಿಗಳೆಲ್ಲರೂ ಬರಿಗಾಲಲ್ಲೇ ದೇವಾಲಯದ ಆವರಣದಲ್ಲಿ ನಿಂತಿರುವಾಗ ಅಮಿತ್ ಶಾ ಮಾತ್ರ ಶೂ ಧರಿಸಿರುವುದು ಈಗ ವಿವಾದದ ಕಿಡಿ ಹೊತ್ತಿಸಿದೆ.

ಹಿಂದೂ ಧರ್ಮದ, ಸನಾನತ ನೀತಿಗಳ ಬಗ್ಗೆ ಮಾತನಾಡುವ ಬಿಜೆಪಿಗರೇ ಈಗ ಹೀಗೆ ನಡೆದುಕೊಂಡರೆ ಹೇಗೆ ಎನ್ನುವ ಪ್ರಶ್ನೆಯನ್ನು ಹಲವರು ಎತ್ತಿದ್ದಾರೆ.ಚಾಮುಂಡಿ

ಅಮಿತ್ ಶಾ ಪ್ರವಾಸ:

ಇಂದು (ಏ 24) ಮೈಸೂರು ಭಾಗದಲ್ಲಿನ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವ ಸಲುವಾಗಿ ಅಮಿತ್ ಶಾ ಮೈಸೂರಿಗೆ ಬಂದಿದ್ದರು.

ಈ ಸುದ್ದಿ ಓದಿದ್ದೀರಾ? : ಪ್ರಜಾಕೀಯ ಅಭ್ಯರ್ಥಿಯ ವಿನೂತನ ಪ್ರಯೋಗ | ಮತದಾರರಿಗೆ “ಬಾಂಡ್” ವಾಗ್ದಾನ

ಸಾಂಸ್ಕೃತಿಕ ನಗರಿಗೆ ಬಂದಿಳಿದ ಅವರು, ಅಲ್ಲಿಂದ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಳ ಸಮಿತಿ ಅವರನ್ನು ಗೌರವಿಸಿತ್ತು.

ಬಳಿಕ ಅಲ್ಲಿಂದ ಹೊರ ಹೊರಡುವ ವೇಳೆ ಎಲ್ಲರೊಂದಿಗೆ ನಿಂತು ಅಮಿತ್ ಶಾ ಫೋಟೋಗೆ ಪೋಸ್ ನೀಡಿದ್ದರು. ಈ ವೇಳೆ ಅವರು ಪಾದರಕ್ಷೆ ಧರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...