ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ‌ ಸಚಿವಾಲಯ; ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

Date:

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ‌ ಸಚಿವಾಲಯ ರಚಿಸಲು ಮಹತ್ವದ ತೀರ್ಮಾನ ಮಾಡಿದ್ದು ಇದರಿಂದ ಈ ಭಾಗದ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಜೊತೆಗೆ ಬಹಳ ಮುಖ್ಯವಾಗಿ ಬೀದರ್-ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಗಳನ್ನಾಗಿ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹತ್ತು ವರ್ಷದ ಬಳಿಕ ಕಲಬುರಗಿಯಲ್ಲಿ ಮಂಗಳವಾರ ಸಚಿವ ಸಂಪುಟ ಸಭೆ ನಡೆದಿದ್ದು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

“ಮಿನಿ ವಿಧಾನಸೌಧಗಳಿಗೆ ಪ್ರಜಾಸೌಧ ಎಂದು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ. 17439 ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನ ಮಾಡಲಾಗಿದೆ. 11770 ಕೋಟಿ ರೂಪಾಯಿಯಲ್ಲಿ , ಕೃಷಿ ಇಲಾಖೆಗೆ 100 ಕೋಟಿ, ಕೈಗಾರಿಕಾ ಇಲಾಖೆಗೆ 1550 ಕೋಟಿ , ಅರಣ್ಯ 32, ಆರೋಗ್ಯ 910 ಕೋಟಿ ಸೇರಿ ನಾನಾ ಇಲಾಖೆಗಳಿಗೆ ಹಣ ಹಂಚಿಕೆ ಮಾಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲ್ಯಾಣ ಕರ್ನಾಟಕದಲ್ಲಿ ಹೊಸದಾಗಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ನಿರ್ಣಯ, 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾಡಲು ತೀರ್ಮಾನ ಮಾಡಿದ್ದೇವೆ. 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಇದರಲ್ಲಿ ಎರಡನ್ನು ಜಿಲ್ಲಾ ಆಸ್ಪತ್ರೆಗಳನ್ನಗಿ ಮೇಲ್ದರ್ಜೆಗೆ ಏರಿಸಲಾಗುವುದು. ಇದಕ್ಕೆ 892 ಕೋಟಿ ವೆಚ್ಚ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ಬೀದರ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಸರ ಪ್ರವಾಸೋದ್ಯಮ ಮತ್ತು ಸಂರಕ್ಷಣಾತ್ಮಕ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಒಟ್ಟು ಮೊತ್ತ 1500 ಲಕ್ಷ ರೂ.ಗಳನ್ನು ಕಲ್ಯಾಣ ಕರ್ನಾಟಕ ಪ್ರದೇಸ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯ ಅನುದಾನದಿಂದ ಹಂಚಿಕೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಸಂಪುಟ ಒಪ್ಪಿದೆ” ಎಂದು ಸಿದ್ದರಾಮಯ್ಯ ವಿವರಿಸಿದರು.

ಇಂದಿನ‌ ಸಂಪುಟ ಸಭೆಯಲ್ಲಿ ಒಟ್ಟು 56 ವಿಷಯಗಳು ಚರ್ಚೆಯಾಗಿ ಒಪ್ಪಿಗೆ ಪಡೆಯಲಾಗಿದೆ. ಇದರಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಪಟ್ಟ ಸಂಗತಿಗಳನ್ನು ಒಪ್ಪಿಗೆ ಪಡೆಯಲಾಗಿದೆ. ಒಟ್ಟು 56 ವಿಷಯಗಳಿಂದ 12692 ಕೋಟಿ ರೂಪಾಯಿ ವೆಚ್ಚವಾಗುತ್ತಿದ್ದು, ಇದರಲ್ಲಿ 46 ವಿಷಯಗಳ ಒಟ್ಟು ಮೊತ್ತ 11,770 ಕೋಟಿ ರೂ.ಆಗಿದೆ.

ಸಚಿವ ಸಂಪುಟ ಸಭೆ 1 1

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಸಚಿವ ಸಂಪುಟದ ತೀರ್ಮಾನಗಳು

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಅಧಿಕಾರಿ/ಸಿಬ್ಬಂದಿಗಳಿಗೆ 998 ಕೋಟಿ ರೂ. ವೆಚ್ಚದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಉದ್ದೇಶಿಸಿರುವ ಸಮಗ್ರ ಟೌನ್‌ಶಿಪ್‌ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.

ಆರ್ಥಿಕ ಇಲಾಖೆಯು ವಿಧಿಸಿರುವ ಷರತ್ತಿಗೊಳಪಟ್ಟು ಯಾದಗಿರಿ ಜಿಲ್ಲೆಯ ಶಹಾಪೂರ ನಗರಕ್ಕೆ, ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯ ರೂ.29298.00 ಲಕ್ಷಗಳ (05 ವರ್ಷಗಳ ನಿರ್ವಹಣೆ ಮತ್ತು ದುರಸ್ಥಿ ಸೇರಿ) ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.

ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ಗೆ ವಸತಿ ಮತ್ತು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮದ್ರಿ ಗ್ರಾಮದ ಬಳಿ ಭೀಮಾ ನದಿಗೆ ಅಡ್ಡಲಾಗಿ ಅಣೆಗಕಟ್ಟನ್ನು ನಿಮಿಇಸಿ 3.63 ಎಂಎಲ್‌ಡಿ ಪ್ರಮಾಣದ ನೀರನ್ನು ಒದಗಿಸಲು ರೂ.35.00 ಕೋಟಿಗಳನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಲು ಒಪ್ಪಿಗೆ.

ಬೀದರ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಸರ ಪ್ರವಾಸೋದ್ಯಮ ಮತ್ತು ಸಂರಕ್ಷಣಾತ್ಮಕ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಒಟ್ಟು ಮೊತ್ತ 1500.00 ಲಕ್ಷಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಿಂದ ಹಂಚಿಕೆ ಮಾಡಿ ವೆಚ್ಚ ಭರಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 12 ಪರಿಶಿಷ್ಟ ಜಾತಿ ಮತ್ತು ಒಂದು ಪರಿಶಿಷ್ಟ ವರ್ಗಗಳ ಒಟ್ಟು 13 ವಸತಿ ಶಾಲೆಗಳಿಗೆ ಅಂದಾಜು ವೆಚ್ಚ 286.00 ಕೋಟಿ ರೂ.ಗಳಲ್ಲಿ (ಪ.ಜಾತಿ – ರು.264.00 ಕೋಟಿ ಪ.ವರ್ಗ-22.00 ಕೋಟಿ) ಸ್ವಂತ ಕಟ್ಟಡ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...