ಆಂಧ್ರದಲ್ಲಿ ‘ಅರಾಜಕತೆ’; ಜುಲೈ 24ರಂದು ದೆಹಲಿಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪ್ರತಿಭಟನೆ

Date:

ಎನ್‌ಡಿಎ ಅಧಿಕಾರಕ್ಕೆ ಬಂದಾಗಿನಿಂದ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಅರಾಜಕತೆಯ ಬಗ್ಗೆ ರಾಷ್ಟ್ರದ ಗಮನ ಸೆಳೆಯಲು ಜುಲೈ 24ರಂದು ದೆಹಲಿಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಶಾಂತಿಯುತ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ ವೈ.ಎಸ್ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ಆಂಧ್ರದಲ್ಲಿ ಟಿಡಿಪಿ ನೇತೃತ್ವದ ಸರ್ಕಾರ ರಚನೆ ಮಾಡಿದಾಗಿನಿಂದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಈ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಸಮಯ ಕೇಳಲಾಗಿದೆ ಎಂದು ರೆಡ್ಡಿ ಹೇಳಿದ್ದಾರೆ.

“ನಾವು ಜುಲೈ 24 ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ. ಎನ್ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಸರ್ಕಾರ ರಚನೆಯಾದ 45 ದಿನಗಳಲ್ಲಿ ಆಂಧ್ರಪ್ರದೇಶವನ್ನು ಅರಾಜಕತೆ ಪೀಡಿತ ರಾಜ್ಯವನ್ನಾಗಿ ಮಾಡಲಾಗಿದೆ. ಈ ಬಗ್ಗೆ ರಾಷ್ಟ್ರದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದು ರೆಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟಿಡಿಪಿ, ಬಿಜೆಪಿ ಮತ್ತು ಜನಸೇನೆಯ ಮೈತ್ರಿ ಸರ್ಕಾರವು ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ. ನಾಯ್ಡು ಮುಖ್ಯಮಂತ್ರಿಯಾದ ಎರಡು ತಿಂಗಳಲ್ಲಿ 36 ರಾಜಕೀಯ ಕೊಲೆಗಳು ಮತ್ತು 300 ಕೊಲೆ ಯತ್ನಗಳು ನಡೆದಿವೆ. ಟಿಡಿಪಿಯ ಕಿರುಕುಳದಿಂದ 37 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ರೆಡ್ಡಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...