ತನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಲು ಮುಂದಾದ ವೈ ಎಸ್‌ ಶರ್ಮಿಳಾ

Date:

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈ ಎಸ್ ಶರ್ಮಿಳಾ ಈಗ ತಾನು ಕಟ್ಟಿದ ‘ಯುವಜನ ಶ್ರಮಿಕ ರೈತ ತೆಲಂಗಾಣ ಪಕ್ಷ’ (ವೈಎಸ್‌ಆರ್‌ಟಿಪಿ)ವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಕುರಿತು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮುಂದಿನ ಆರೇಳು ತಿಂಗಳಲ್ಲಿ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನವೇ ವೈ ಎಸ್ ಶರ್ಮಿಳಾ ಅವರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. ಜುಲೈ 8 ರಂದು ವೈಎಸ್‌ಆರ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ವಿಲೀನದ ಕುರಿತು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ಚುನಾವಣೆಯಲ್ಲಿನ ಕಾಂಗ್ರೆಸ್ ಗೆಲುವಿನಿಂದ ಹುರುಪು ಪಡೆದಿರುವ ಕಾಂಗ್ರೆಸ್ ಹೈಕಮಾಂಡ್ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸುವ ಸಲುವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಶರ್ಮಿಳಾ ಅವರಿಗೆ ನಿರ್ಣಾಯಕ ನಾಯಕತ್ವದ ಪಾತ್ರವನ್ನು ನೀಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಚಿಂತಿಸುತ್ತಿದೆ ಎಂದು ವರದಿಯೊಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದರೆ ತಮ್ಮ ಸಹೋದರ, ಸದ್ಯ ಆಂಧ್ರ ಮುಖ್ಯಮಂತ್ರಿ ಆಗಿರುವ ವೈ ಎಸ್ ಜಗನ್‌ಮೋಹನ್ ರೆಡ್ಡಿ ಅವರೊಂದಿಗಿನ ಸಂಬಂಧ ಇನ್ನಷ್ಟು ಹದಗೆಡಬಹುದು ಎಂಬ ಆತಂಕವೂ ಶರ್ಮಿಳಾ ಅವರಿಗಿದೆ. ಆದರೆ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ದೊಡ್ಡ ಸಾಹಸಕ್ಕೆ ಕೈಹಾಕುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೋದಿ ಅಮೆರಿಕ ಭೇಟಿ: ಮಾನವ ಹಕ್ಕುಗಳ ಕಾರ್ಯಕರ್ತರಿಂದ ಪ್ರತಿಭಟನೆ

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ಕೆಲವೇ ದಿನಗಳಲ್ಲಿ ಶರ್ಮಿಳಾ ಅವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಮಯದಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನದ ಮಾತುಕತೆ ನಡೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.

ಮುಂದಿನ ತಿಂಗಳು ಕಡಪದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಪಕ್ಷಗಳ ವಿಲೀನದ ಬಗ್ಗೆ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...