ಮೂರನೇ ಮಗುವಿಗೆ ಜನ್ಮ ನೀಡಿದರೆ 50,000 ರೂ., ಗಂಡು ಮಗು ಜನಿಸಿದರೆ ಹಸು ನೀಡುತ್ತೇವೆ: ಆಂಧ್ರಪ್ರದೇಶ ಸಂಸದ ಘೋಷಣೆ

Date:

ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹ ಧನ ನೀಡಬೇಕೆಂದು ಹೇಳಿದ ಬೆನ್ನಲ್ಲೇ ವಿಜಯನಗರದ ಸಂಸದ ಕಾಲಿಸೆಟ್ಟಿ ಅಪ್ಪಲ ನಾಯ್ಡು ಹೆಚ್ಚು ಮಕ್ಕಳು ಹೆರುವವರಿಗೆ ಪ್ರೋತ್ಸಾಹಧನ ಘೋಷಿಸಿದ್ದಾರೆ. ಮೂರನೇ ಮಗುವಿಗೆ ಜನ್ಮ ನೀಡಿದರೆ 50,000 ರೂಪಾಯಿ ನೀಡಲಾಗುವುದು, ಗಂಡು ಮಗು ಜನಿಸಿದರೆ ಹಸು ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಈ ಮೂಲಕ ಲಿಂಗ ತಾರತಮ್ಯದ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಗು ಜನಿಸಿದರೆ ಯಾಕೆ ಹಸು ನೀಡುವುದಿಲ್ಲ ಎಂಬ ಪ್ರಶ್ನೆ ಈಗ ಎದ್ದಿದೆ.

ಹಾಗೆಯೇ ಲೋಕಸಭಾ ಸದಸ್ಯರು ತಮ್ಮ ಸಂಬಳದಿಂದ ನಗದು ಪ್ರೋತ್ಸಾಹ ಧನವನ್ನು ನೀಡುವುದಾಗಿ ಹೇಳಿದ್ದಾರೆ. ಅಪ್ಪಾ ನಾಯ್ಡು ಅವರ ಘೋಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಟಿಡಿಪಿ ನಾಯಕರು ಮತ್ತು ಕಾರ್ಯಕರ್ತರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ಘೋಷಣೆಯನ್ನು ರೀಟ್ವೀಟ್ ಮಾಡುತ್ತಿದ್ದಾರೆ. ಈ ನಡುವೆ ಮುಖ್ಯಮಂತ್ರಿ ನಾಯ್ಡು ಈ ಘೋಷಣೆ ಮಾಡಿದ ಸಂಸದರನ್ನು ಶ್ಲಾಘಿಸಿದ್ದಾರೆ.

ಇದನ್ನು ಓದಿದ್ದೀರಾ? ಆಶಾ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ, ವೇತನ ಸಹಿತ ಹೆರಿಗೆ ರಜೆ ಜಾರಿಗೊಳಿಸಿದ ಆಂಧ್ರಪ್ರದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯನಗರದ ರಾಜೀವ್ ಸ್ಪೋರ್ಟ್ಸ್ ಕಾಂಪೌಂಡ್‌ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಸಭೆಯಲ್ಲಿ ಸಂಸದರು ಈ ಘೋಷಣೆ ಮಾಡಿದ್ದಾರೆ.

ಮಾರ್ಚ್‌ನಲ್ಲಿ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ, ದಕ್ಷಿಣ ಭಾರತದಲ್ಲಿ ವೃದ್ಧಾಪ್ಯ ಜನಸಂಖ್ಯೆ ಹೆಚ್ಚಳ ಸವಾಲಾಗಿದೆ. ಆದರೆ ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಯುವಕರ ಸಂಖ್ಯೆ ಅಧಿಕವಾಗಿದೆ ಎಂದು ಹೇಳಿದರು. ಹಾಗೆಯೇ ಜನಸಂಖ್ಯಾ ನಿಯಂತ್ರಣಕ್ಕಿಂತ ದೀರ್ಘಾವಧಿಯ ಜನಸಂಖ್ಯಾ ನಿರ್ವಹಣೆ ಮಾಡುವುದು ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ವಿದ್ಯುತ್ ಅವಘಡ; ನಾಲ್ವರು ಮೃತ್ಯು

“ನಾನು ಕುಟುಂಬ ಯೋಜನೆಯನ್ನು ಪ್ರತಿಪಾದಿಸುತ್ತಿದ್ದೆ. ಈಗ ನಾನು ನನ್ನ ಅಭಿಪ್ರಾಯಗಳನ್ನು ಬದಲಾಯಿಸುತ್ತಿದ್ದೇನೆ. ಈಗ ಜನಸಂಖ್ಯೆಯನ್ನು ಉತ್ತೇಜಿಸುತ್ತಿದ್ದೇನೆ. ಭವಿಷ್ಯಕ್ಕಾಗಿ ನಾವು ಜನಸಂಖ್ಯಾ ಲಾಭಾಂಶವನ್ನು ನಿರ್ವಹಿಸಬಹುದಾದರೆ, ಭಾರತ ಮತ್ತು ಭಾರತೀಯರು ಉತ್ತಮ ಸ್ಥಾನದಲ್ಲಿರುತ್ತಾರೆ. ಜಾಗತಿಕ ಸಮುದಾಯಗಳು ಜಾಗತಿಕ ಸೇವೆಗಳಿಗಾಗಿ ಭಾರತೀಯರಾದ ನಮ್ಮನ್ನು ಅವಲಂಬಿಸಿವೆ” ಎಂದು ಹೇಳಿದರು.

ಇನ್ನು ಚಂದ್ರಬಾಬು ನಾಯ್ಡು ಶನಿವಾರ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಮಕ್ಕಳ ಸಂಖ್ಯೆಯನ್ನು ಲೆಕ್ಕಿಸದೆ ಹೆರಿಗೆಯ ಸಮಯದಲ್ಲಿ ಮಾತೃತ್ವ ರಜೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ಘೋಷಣೆಗಳನ್ನು ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...