ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಳ್ಳಂಬೆಳಗ್ಗೆ ಬಂಧನ

Date:

‘ಸ್ಕಿಲ್​ ಡೆವಲಪ್​​ಮೆಂಟ್ ಹಗರಣ’ದಲ್ಲಿ ಭಾಗಿಯಾದ ಆರೋಪದಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಇಂದು (ಸೆ.9 ಶನಿವಾರ) ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ ‘ಸ್ಕಿಲ್​ ಡೆವಲಪ್​​ಮೆಂಟ್ ಯೋಜನೆ’ಯಲ್ಲಿ ಚಂದ್ರಬಾಬು ನಾಯ್ಡು ಅವರು ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ನಂದ್ಯಾಲ್ ರೇಂಜ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ (ಸಿಐಡಿ) ನೇತೃತ್ವದ ಪೊಲೀಸರ ತಂಡ ನಂದ್ಯಾಲ ಪಟ್ಟಣದಲ್ಲಿ ಆರ್‌ಕೆ ಫಂಕ್ಷನ್ ಹಾಲ್‌ನಲ್ಲಿ ಶಿಬಿರದಲ್ಲಿದ್ದ ಚಂದ್ರಬಾಬು ನಾಯ್ಡು ಅವರನ್ನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ವಶಕ್ಕೆ ಪಡೆಯಲು ಬಂದಿದ್ದರು. ಈ ವೇಳೆ ನಾಯ್ಡು ಅವರು ತಮ್ಮ ಕಾರವಾನ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಟಿಡಿಪಿ ಕಾರ್ಯಕರ್ತರು ಪೊಲೀಸರಿಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಬೆಳಗ್ಗೆ 5.30 ರವರೆಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲು ಬಿಡಲಿಲ್ಲ. ಕೊನೆಗೆ ಬೆಳಗ್ಗೆ 6 ಗಂಟೆ ಸುಮಾರಿಗೆ ಪೊಲೀಸರು ನಾಯ್ಡು ವಾಹನದಿಂದ ಅವರನ್ನು ಕೆಳಗಿಳಿಸಿ ಬಂಧಿಸಿದ್ದು, ವಿಜಯವಾಡಕ್ಕೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ನೀಡಿದ ನೋಟಿಸ್ ಪ್ರಕಾರ, ಪೊಲೀಸರು ನಾಯ್ಡು ಅವರನ್ನು ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409, 201, 34 & 37 ಹಾಗೂ ಭ್ರಷ್ಟಾಚಾರ ತಡೆ ಕಾಯಿದೆ, 1988 ಇತರ ವಿಭಾಗಗಳಡಿ ಬಂಧಿಸಲಾಗಿದೆ.

ಅಲ್ಲದೇ ನೋಟಿಸ್​ನಲ್ಲಿ ಜಾಮೀನು ರಹಿತ ಅಪರಾಧ, ಜಾಮೀನಿನ ಮೇಲೆ ಬಿಡುಗಡೆಯಾಗುವಂತಿಲ್ಲ ಎಂದು ತಿಳಿಸಲಾಗಿದೆ. ಆದರೆ “ನ್ಯಾಯಾಲಯದ ಮೂಲಕ ಮಾತ್ರ ಜಾಮೀನು ಪಡೆಯಬಹುದು” ಎಂದು ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ ಧನುಂಜಯುಡು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...