‘ಅನ್ನಭಾಗ್ಯ’ ಮೋದಿ ಅವರದ್ದು, ‘ಕನ್ನಭಾಗ್ಯ’ ಸಿದ್ದರಾಮಯ್ಯರದ್ದು: ಆರ್‌ ಅಶೋಕ್‌ ಕಿಡಿ

Date:

ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಈಗ ಕಾಂಗ್ರೆಸ್‌ ನಾಯಕರು ಮಾತಾಡುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್‌ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ ಮತ್ತು ಚುನಾವಣಾ ಸಂಬಂಧದ ಸಭೆ ಹಾಗೂ ಬಂಗಾರಪೇಟೆ ಕ್ಷೇತ್ರದ ಅಂಚಾಳ ಗ್ರಾಮದಲ್ಲಿ ನಡೆದ ಪ್ರಚಾರಸಭೆಯಲ್ಲಿ ಅವರು ಮಾತನಾಡಿದರು.

“ನರೇಂದ್ರ ಮೋದಿ ಪ್ರಧಾನಿಯಾದ ನಂತರ ಡಾ.ಬಿ.ಆರ್‌.ಅಂಬೇಡ್ಕರ್‌ ಬರೆದ ಸಂವಿಧಾನಕ್ಕೆ ಹೆಚ್ಚು ಮಹತ್ವ ನೀಡಿದ್ದಾರೆ. ಅಂಬೇಡ್ಕರ್‌ ಅವರು ತುಳಿತಕ್ಕೊಳಗಾದ ಜನರ ಪರವಾಗಿ ದನಿ ಎತ್ತಿದ್ದರು. ಅಂತಹ ಮಹಾನ್‌ ವ್ಯಕ್ತಿ ಬಾಬಾ ಸಾಹೇಬ್‌ ಅಂಬೇಡ್ಕರರು ಲೋಕಸಭೆಗೆ ಹೋಗಲು ಚುನಾವಣೆಗೆ ನಿಂತಾಗ ಅವರನ್ನು ಕಾಂಗ್ರೆಸ್‌ ಹೀನಾಯವಾಗಿ ಸೋಲಿಸಿತ್ತು. ಅಂದಿನ ಪ್ರಧಾನಿ ನೆಹರೂ ಅಂಬೇಡ್ಕರರನ್ನು ಸೋಲಿಸುವ ಕರೆ ನೀಡಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರರು ತೀರಿಕೊಂಡಾಗ ಸ್ಮಾರಕ ನಿರ್ಮಿಸಲು ಕೂಡ ಕಾಂಗ್ರೆಸ್‌ ಜಾಗ ಕೊಡಲಿಲ್ಲ. ಇಷ್ಟೆಲ್ಲ ಅನ್ಯಾಯ ಮಾಡಿದ ಕಾಂಗ್ರೆಸ್‌ಗೆ ದಲಿತರು ಮತ ನೀಡಬೇಕೆ? ಎಂದು ಆಲೋಚಿಸಬೇಕು. ಪ್ರಧಾನಿ ಮೋದಿ ಅಂಬೇಡ್ಕರ್‌ ಐದು ಸ್ಥಳಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಹಾಗಾಗಿ ಅವರಿಗೆ ದಲಿತರು ಮತ ನೀಡಬೇಕು” ಎಂದು ವಿನಂತಿಸಿದರು.

“ಪಾಕಿಸ್ತಾನ ಅನೇಕ ಬಾರಿ ದೇಶದ ಮೇಲೆ ದಾಳಿ ಮಾಡಿದೆ. ಇತ್ತೀಚೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್‌ನವರೇ ಕರೆದುಕೊಂಡು ಬಂದವರು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದರು. ಇಂತಹವರಿಗೆ ಶಿಕ್ಷೆ ನೀಡದೆ ಕಾಂಗ್ರೆಸ್‌ ಸರ್ಕಾರ ಸುಮ್ಮನಿದೆ. ಸಿಎಂ ಸಿದ್ದರಾಮಯ್ಯನವರು ಆಗಾಗ್ಗೆ ಅನ್ನಭಾಗ್ಯ ಎಂದು ಹೇಳುತ್ತಾರೆ. ಆದರೆ ಅದು ನಿಜವಾಗಿಯೂ ಮೋದಿ ಭಾಗ್ಯವಾಗಿದೆ. ಇವರದ್ದು ಕನ್ನ ಭಾಗ್ಯ” ಎಂದು ಟೀಕಿಸಿದರು.

“ಬರ ಪರಿಹಾರವನ್ನು ಕೇಳಿದರೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ ಕೈ ತೋರಿಸುತ್ತಾರೆ. ಈ ಚುನಾವಣೆ ಮುಗಿದ ನಂತರ ನೌಕರರಿಗೆ ಸಂಬಳ ಕೊಡಲು ಕೂಡ ಸರ್ಕಾರದ ಬಳಿ ಹಣವಿರುವುದಿಲ್ಲ” ಎಂದರು.

ಮೈತ್ರಿ ಅಭ್ಯರ್ಥಿ ಮಲ್ಲೇಶ್‌ ಬಾಬು ಅವರ ತಂದೆ ಐಎಎಸ್‌ ಅಧಿಕಾರಿಯಾಗಿ ದಲಿತರಿಗೆ ಸಹಾಯ ಮಾಡಿದ್ದಾರೆ. ವಿದ್ಯಾವಂತ ಯುವಕ ಮಲ್ಲೇಶ್‌ ಅವರಿಗೆ ಎಲ್ಲರೂ ಬೆಂಬಲಿಸಬೇಕು. ಹಿಂದಿನ ಸಂಸದ ಮುನಿಸ್ವಾಮಿ ಅವರ ಹೆಸರನ್ನು ಹಿಂದೆ ನಾನೇ ಶಿಫಾರಸು ಮಾಡಿದ್ದೆ. ಆಗಲೂ ಎಲ್ಲರೂ ಅಪಾರ ಬೆಂಬಲ ನೀಡಿದ್ದರು. ಈಗಲೂ ಅದೇ ರೀತಿ ಬೆಂಬಲ ನೀಡಬೇಕು” ಎಂದು ಕೋರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...