ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

Date:

ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಇಂದು ಹೇಳಿದೆ. ಈ ಪ್ರಕರಣದ ವಿರುದ್ಧವಾಗಿ ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ ಕುರಿತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವಕೀಲರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಡೆದ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ಬಗ್ಗೆ ನಿಜವಾಗಿಯೂ ಕಾಳಜಿಯಿಲ್ಲ ಎಂದು ಹೈಕೋರ್ಟ್ ಟೀಕೆ ಮಾಡಿದೆ.

ಇದನ್ನು ಓದಿದ್ದೀರಾ? ವಿಡಿಯೊ | ಚಾಟಿಯಲ್ಲಿ ಹೊಡೆದುಕೊಂಡು ನಗೆಪಾಟಲಿಗೀಡಾದ ಅಣ್ಣಾಮಲೈ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ನಿವೃತ್ತ ಐಪಿಎಸ್ ಅಧಿಕಾರಿ ಪ್ರವೀಣ್ ದೀಕ್ಷಿತ್ ಸೇರಿದಂತೆ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಎರಡು ದಿನಗಳ ತನಿಖೆಯಲ್ಲಿ, ಸಮಿತಿಯು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದು, ಸಂತ್ರಸ್ತೆಯ ಕುಟುಂಬಸ್ಥರನ್ನು, ಅಧಿಕಾರಿಗಳು ಮತ್ತು ಎನ್‌ಜಿಒಗಳಿಗೆ ಭೇಟಿ ನೀಡಿದೆ. ಕ್ಯಾಂಪಸ್ ಭದ್ರತೆ ಪರಿಶೀಲಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎನ್‌ಸಿಡಬ್ಲ್ಯೂ, “ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಎನ್‌ಸಿಡಬ್ಲ್ಯೂ ಭದ್ರತೆ ಪರಿಶೀಲಿಸಿದೆ. ಎಸ್‌ಐಟಿಯನ್ನು ಭೇಟಿ ಮಾಡಿದೆ. ಶಿಫಾರಸುಗಳೊಂದಿಗೆ ವರವಾದ ವರದಿಯನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದೆ.

ಡಿಸೆಂಬರ್ 23ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಸಂತ್ರಸ್ತೆ ಈ ಬಗ್ಗೆ ದೂರು ನೀಡಿದ್ದು, ತಾನು ತನ್ನ ಸ್ನೇಹಿತನ ಮೇಲೆ ದಾಳಿ ನಡೆದಿದೆ. ಹತ್ತಿರದ ಪೊದೆಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ನೀಡಲಾಗಿದೆ ಎಂದು ಆರೋಪಿದ್ದಾರೆ.

ಇದನ್ನು ಓದಿದ್ದೀರಾ? ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸಲ್ಲ ಎಂದ ಅಣ್ಣಾಮಲೈ

ಆರೋಪಿಯನ್ನು ಬೀದಿ ಬದಿ ವ್ಯಾಪಾರಸ್ಥ ಜ್ಞಾನಶೇಖರನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಜ್ಞಾನಶೇಖರನ್‌ಗೆ ಹಲವು ಕ್ರಿಮಿನಲ್ ಹಿನ್ನೆಲೆಗಳಿವೆ. ಈ ಪ್ರಕರಣದ ತನಿಖೆಗೆ ಆಗ್ರಹ ಕೇಳಿಬರುತ್ತಿದ್ದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿತ್ತು.

ಪ್ರಕರಣದಲ್ಲಿ ಬಿಜೆಪಿ ರಾಜಕೀಯ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಡೆದ ಅತ್ಯಾಚಾರ, ಮಹಿಳಾ ವಿರೋಧಿ ದೌರ್ಜನ್ಯ ಮೊದಲಾದವುಗಳ ಬಗ್ಗೆ ಮಾತನಾಡದ ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಈಗ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ವಿರುದ್ಧವಾಗಿ ಬೃಹತ್ ಹೋರಾಟಕ್ಕೆ ಮುಂದಾಗಿರುವುದೇ ಪ್ರಕರಣ ರಾಜಕೀಯ ದಿಕ್ಕು ಪಡೆಯಲು ಕಾರಣವಾಗಿದೆ. ಚಾಟಿಯಿಂದ ತನಗೆ ತಾನು ಹೊಡೆದುಕೊಳ್ಳುವ ಪ್ರತಿಭಟನೆಯನ್ನೂ ನಡೆಸಿ ಅಣ್ಣಾಮಲೈ ಟ್ರೋಲ್ ಆಗಿದ್ದಾರೆ. ಇವೆಲ್ಲವುದರ ನಡುವೆ “ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣ ವನ್ನು ರಾಜಕೀಯಗೊಳಿಸಲಾಗುತ್ತಿದೆ” ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...