ಮೂರು ತಿಂಗಳಿಂದ ಅನ್ನಭಾಗ್ಯ – ಗೃಹಲಕ್ಷ್ಮಿ ಹಣ ಹಾಕಿಲ್ಲ, ಕೂಡಲೇ ಜಮಾ ಮಾಡುತ್ತೇವೆ: ಡಿ ಕೆ ಶಿವಕುಮಾರ್

Date:

ಮೂರು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣವನ್ನು ಸರ್ಕಾರ ಹಾಕಿಲ್ಲ. ಶೀಘ್ರದಲ್ಲೇ ಬಾಕಿ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳು ಕೆಲವು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಕೇಳಿದಾಗ ಡಿ ಕೆ ಶಿವಕುಮಾರ್‌ ಉತ್ತರಿಸಿದರು.

‘ನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್’ ಎಂದು ಟೀಕಿಸಿದ್ದಾರೆ ಎಂದು ಕೇಳಿದಾಗ, “ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರು ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿವರು ಇರುವುದೇ ಟೀಕೆ ಮಾಡಲು. ಬಿಜೆಪಿಗೆ ಬೇರೆ ಏನು ಕೆಲಸ ಇದೆ. ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದು ದೊಡ್ಡ ಮೊತ್ತದ ಯೋಜನೆ, ಇದರ ಗುಣಮಟ್ಟ ಸರಿಯಾಗಿದೆಯೇ? ಸದ್ಯ 150 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಯುತ್ತಿದೆ. 1,700 ಕೋಟಿ ಮೊತ್ತದ ಯೋಜನೆ. ಇದನ್ನು ಕಾಲಮಿತಿಯೊಳಗೆ ಮುಗಿಸುವ ಗುರಿ ಹೊಂದಿದ್ದೇವೆ. ಮುಂದೆಯೂ ಇಂತಹ ಯೋಜನೆ ಕೈಗೆತ್ತಿಕೊಳ್ಳುವ ಉದ್ದೇಶವಿದೆ. ಈ ವಿಚಾರವಾಗಿ ಸ್ಥಳೀಯ ಶಾಸಕರ ಅಭಿಪ್ರಾಯ ಏನಿದೆ ಎಂದು ಚರ್ಚೆ ಮಾಡಿದ್ದೇನೆ. ಮತ್ತೆ ಕೆಲವು ಯೋಜನೆ ಕಾಮಗಾರಿ ಆದೇಶ ಆಗಿಲ್ಲ. ಬೆಂಗಳೂರಿನ ರಸ್ತೆಗಳನ್ನು ಸುಧಾರಿಸಲು 600 ಕೋಟಿ ಮೊತ್ತದ ಯೋಜನೆ ಹಮ್ಮಿಕೊಂಡಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ಬೆಂಗಳೂರಿನ ಕೆಲವು ಸಂಚಾರಿ ಯೋಜನೆಗಳ ಬಗ್ಗೆ ಎತ್ತಿರುವ ಪ್ರಶ್ನೆ ಬಗ್ಗೆ ಕೇಳಿದಾಗ, “ಅವರು ಏನು ಹೇಳಿದ್ದಾರೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಒಳ್ಳೆಯ ಸಲಹೆ ಕೊಟ್ಟಿದ್ದರೆ ತೆಗೆದುಕೊಳ್ಳುತ್ತೇವೆ. ರಾಜಕಾರಣ ಇದ್ದರೆ ನಾವು ಅದನ್ನು ನಿಭಾಯಿಸುತ್ತೇವೆ” ಎಂದು ಹೇಳಿದರು.

ಎಐಸಿಸಿಯನ್ನು ನೀವು ದುರ್ಬಳಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ರಾಜಣ್ಣ ಹೇಳಿದ್ದಾರೆ ಎಂದು ಕೇಳಿದಾಗ, “ಈಗ ಚರ್ಚೆ ಬೇಡ, ನಾನು ಪಕ್ಷದ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇರಳಕ್ಕೆ ಹೋಗುತ್ತಿದ್ದೇನೆ. ನಂತರ ರಾಜಸ್ಥಾನದಲ್ಲಿ ಸಚಿವರುಗಳ ಸಭೆ ಇದ್ದು, ಅಧಿಕಾರಿಗಳ ಸಮೇತ ಪ್ರಯಾಣ ಮಾಡುತ್ತಿದ್ದೇನೆ. ಅಲ್ಲಿಂದ ಬಂದ ನಂತರ ಮಾತನಾಡುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...