ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು: ಬಸವರಾಜ ಬೊಮ್ಮಾಯಿ

Date:

ಅಕ್ಕಿ ಕೊರತೆಯಿಂದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ತಲಾ 170 ರೂ. ಕೊಡಲು ರಾಜ್ಯ ಸರ್ಕಾರ ನಿರ್ಧರಿಸುವುದರ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು ಬಂದಿದೆ ಎಂದು ಟೀಕಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡುವಲ್ಲಿ ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ” ಎಂದು ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ. ಸುಳ್ಳು ಗ್ಯಾರೆಂಟಿ ಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ 10 ಕೆ.ಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ. ಗಳಂತೆ ಹತ್ತು ಕೆಜಿಗೆ ತಗಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ‌ ಜನರಿಗೆ ಕ್ಷಮೆ ಕೇಳಿ” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಭೆ ಸಮಾರಂಭಗಳಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ; ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚನೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...