ಪ್ರತಿ ಟನ್‌ ಕಬ್ಬಿಗೆ ₹3,400 ಘೋಷಣೆ, ನಾಳೆಯಿಂದ ಕಬ್ಬು ಕಟಾವಿಗೆ ಸೂಚನೆ: ಸಚಿವ ಶಿವಾನಂದ ಪಾಟೀಲ

Date:

‘ರಾಜ್ಯದಲ್ಲಿ ಆರು ಲಕ್ಷ ಹೆಕ್ಟೇರ್ ಕಬ್ಬು ಕಟಾವಿಗೆ ಸಿದ್ದವಿದ್ದು, ಎಂಬತ್ತು ಕಾರ್ಖಾನೆಗಳು ಕಬ್ಬು ಅರೆಯಲಿವೆ. ಪ್ರತಿ ಟನ್‌ ಕಬ್ಬಿಗೆ ₹3,400 ಘೋಷಣೆ ಮಾಡಲಾಗಿದೆ. ಕಳೆದ ವರ್ಷ ₹3,150 ಇತ್ತು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪ್ರಸ್ತುತ ವರ್ಷ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಅರೆಯುವ ಹಂಗಾಮನ್ನು ಒಂದು ವಾರ ಮೊದಲು ಆರಂಭಿಸುವಂತೆ ಆದೇಶ ಹೊರಡಿಸಲಾಗಿದೆ” ಎಂದರು.

“ಈ ಮೊದಲು ನವೆಂಬರ್ 15ರಿಂದ ಕಬ್ಬು ಅರೆಯಲು ಆರಂಭಿಸುವಂತೆ ಆದೇಶಿಸಲಾಗಿತ್ತು. ರೈತರ ಒತ್ತಾಯ ಹಾಗೂ ಕಾರ್ಖಾನೆ ಮಾಲೀಕರ ಕೋರಿಕೆ ಮೇರೆಗೆ ನವೆಂಬರ್ 8ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಮೂರು ತಿಂಗಳ ಹಿಂದೆಯೇ ಆರಂಭಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಸರು ಕಾಳು ಖರೀದಿ ಪ್ರಕ್ರಿಯೆ

“ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಪ್ರಕ್ರಿಯೆ ಮುಗಿದಿತ್ತು. ಈಗ ಮತ್ತೆ ಅದನ್ನು ವಿಸ್ತರಿಸಿ, 32 ಸಾವಿರ ಮೆಟ್ರಿಕ್ ಟನ್‌ ಖರೀದಿವರೆಗೆ ಹೆಚ್ಚಳ ಮಾಡಲಾಗಿದೆ. ಅದರ ಜೊತೆಗೆ ಸೋಯಾಬಿನ್ ಖರೀದಿ ಸಹ ವಿಸ್ತರಿಸಲಾಗಿದೆ” ಎಂದರು.

“ದರ ಕುಸಿತವಾದಾಗಲೆಲ್ಲ ಬೆಳೆಗೆ ಬೆಂಬಲ ಬೆಲೆ ಘೋಷಿಸಿ ಎಪಿಎಂಸಿಯಲ್ಲಿ ಖರೀದಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಸೋಯಾಬಿನ್, ಹೆಸರು, ಸೂರ್ಯಕಾಂತಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿ, ಏಕಕಾಲದಲ್ಲಿ ಖರೀದಿಸಲಾಗಿದೆ. ಎಪಿಎಂಸಿ ಕಾಯ್ದೆ ಹಿಂಪಡೆದ ಕಾರಣ ರಾಜ್ಯದಲ್ಲಿನ 166 ಎಪಿಎಂಸಿ ₹200 ಕೋಟಿ ಲಾಭಗಳಿಸಿದೆ” ಎಂದು ವಿವರಿಸಿದರು.

‘ನೂತನ ಜವಳಿ ಕಾಯ್ದೆ ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ಸೇರಿದಂತೆ ಇತರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ನೇಕಾರ ಸಮುದಾಯದ ಯುವಕರು ಬೇರೆ ಉದ್ಯೋಗದತ್ತ ಮುಖ ಮಾಡಿರುವುದರಿಂದ, ನೇಕಾರ ವೃತ್ತಿ ಕ್ಷೀಣಿಸುತ್ತಿದೆ. ಆದರೂ, ಅದಕ್ಕೆ ಉತ್ತೇಜನ ನೀಡಬೇಕೆನ್ನುವ ಕಾರಣಕ್ಕೆ ನೇಕಾರ ಸಮ್ಮಾನ್ ಯೋಜನೆ ಜಾರಿಗೆ ತಂದು, ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಉಚಿತ ವಿದ್ಯುತ್ ಸಹ ಪೂರೈಕೆ ಮಾಡಲಾಗುತ್ತಿದೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...