ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು; ಸಿಎಂ ವಜಾಕ್ಕೆ ಡಿ ಎಸ್ ಅರುಣ್ ಮನವಿ

Date:

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಗಲೇ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದು, ಈ ಬೆನ್ನಲ್ಲೇ ಇದೀಗ ಮತ್ತೊಂದು ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಜಿಲ್ಲಾ​ ಮತ್ತು ತಾಲೂಕು ಪಂಚಾಯತ್​ನಲ್ಲಿ ಬಾಕಿ ಉಳಿದಿರುವ 1,494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಅರುಣ್​ ಅವರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್ ಅವರಿಗೆ ದೂರು ನೀಡಿದ್ದಾರೆ.

1,494 ಕೋಟಿ ರೂ. ಹಣ ಎಲ್ಲಿದೆ? ರಾಜ್ಯ ಸರ್ಕಾರದ ಖಜಾನೆಯಲ್ಲೂ ಇಲ್ಲ. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಕೋರಿ ದೂರಿನಲ್ಲಿ ಅರುಣ್ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಅವರಿಂದ ಸಂವಿಧಾನದ ಬಾಧ್ಯತೆಯ ಉಲ್ಲಂಘನೆ ಮತ್ತು ಅಸಾಂವಿಧಾನಿಕ ಹಣಕಾಸು ವ್ಯವಹಾರಕ್ಕಾಗಿ ಅವರನ್ನು ವಜಾಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಂಎಲ್ ಸಿ ಅರುಣ್​, “ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇನೆ. 2022-23ರ ಅವಧಿಯಲ್ಲಿ ನಮ್ಮ ಸರ್ಕಾರದ ಅಧಿಕಾರದಲ್ಲಿ ಇತ್ತು. ಜಿಲ್ಲಾ ಮತ್ತು ತಾಲೂಕು ಪಂಚಾಯತ್​ಗಳಲ್ಲಿ ಎಷ್ಟು ಹಣ ಬಳಕೆ ಆಗಿದೆ. ಉಳಿದ ಮೊತ್ತ ಯಾವುದಕ್ಕೆ ಉಪಯೋಗ ಮಾಡಲಾಗಿದೆ ಎಂದು ಪ್ರಶ್ನೆ ಮಾಡಿದ್ದೇನೆ. 1953 ಕೋಟಿ ರೂ. ಹಣ ಇತ್ತು, ಸಂಚಿತ ನಿಧಿಗೆ ಉಳಿದ ಹಣ ಹೋಗಬೇಕು. ಹಣ ಬಳಕೆ ಮಾಡಬೇಕೆಂದರೆ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...