ಬೆಂಗಳೂರು | ‘ಕಲ್ಲಂಗಡಿ’ ಹಣ್ಣಿನ ರೂಪಕದೊಂದಿಗೆ ಪ್ಯಾಲೆಸ್ತೀನ್ ಪರ ಪ್ರತಿಭಟಿಸಿದವರ ಮೇಲೆ ಎಫ್‌ಐಆರ್

Date:

ಹಮಾಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿರುವುದನ್ನು ಖಂಡಿಸಿ, ಕದನ ವಿರಾಮಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜದ ಬಣ್ಣವಿರುವ ‘ಕಲ್ಲಂಗಡಿ’ ಹಣ್ಣಿನ ರೂಪಕದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಸಿದವರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಳೆದ ಭಾನುವಾರ(ನ.5) ಬೆಂಗಳೂರಿನ ಸೇಂಟ್ ಮಾರ್ಕ್ಸ್‌ ರಸ್ತೆಯ ಬೌರಿಂಗ್ ಪೆಟ್ರೋಲ್ ಬಂಕ್ ಬಳಿಯಲ್ಲಿ ನಿಂತು, ‘OFF ALL THE FRUITS TO HAVE EVER EXISTED WATERMELON HAS BEEN THE BRAVEST, CEASE FIRE NOW’ ಎಂಬಿತ್ಯಾದಿ ಪ್ಲೆಕಾರ್ಡ್‌ಗಳನ್ನು ಇಟ್ಟುಕೊಂಡು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ವಿರೋಧಿಸಿ, ಕದನ ವಿರಾಮಕ್ಕೆ ಆಗ್ರಹಿಸಿ ‘ಕಲ್ಲಂಗಡಿ’ ಹಣ್ಣಿನ ರೂಪಕದೊಂದಿಗೆ ಪ್ಯಾಲೆಸ್ತೀನ್‌ ಪರವಾಗಿ ಪ್ರತಿಭಟನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ನಡೆಸಲು ಅನುಮತಿ ಪಡೆಯದೆ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

Cubbon Park Police station

ಎಫ್‌ಐಆರ್‌ನಲ್ಲಿ, ‘ನ.5ರಂದು ಸೈಂಟ್ ಮಾರ್ಕ್ಸ್‌ ರಸ್ತೆಯಲ್ಲಿ ಕೆಲವು ಮಂದಿಯ ಗುಂಪು, ಯಾವುದೇ ಅನುಮತಿ ಪಡೆಯದೇ ಪ್ಯಾಲೆಸ್ತೀನ್ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ನೂರಾರು ಮಂದಿ ಸಾರ್ವಜನಿಕರು ಇದರಲ್ಲಿ ಭಾಗವಹಿಸಿದ್ದರು. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಸೇಂಟ್ ಮಾರ್ಕ್ಸ್‌ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆ ಉಂಟು ಮಾಡಿ, ಹೈಕೋರ್ಟ್‌ ಆದೇಶ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಅಲ್ಲದೇ, ಗುಂಪಿನಲ್ಲಿದ್ದವರು ಹಿಡಿದುಕೊಂಡಿದ್ದ ಪ್ಲೆಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದೇವೆ’ ಎಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಎಎಸ್‌ಐ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಐಪಿಸಿಯ 1860 ಕಲಂನ 149, 188, 283, 290, 291 ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸಂಘಪರಿವಾರದ ಬೆಂಬಲಿಗನಿಂದ ಉಪಟಳ
ಸೇಂಟ್ ಮಾರ್ಕ್ಸ್‌ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಯುವಕ-ಯುವತಿಯರು ಕದನ ವಿರಾಮಕ್ಕೆ ಆಗ್ರಹಿಸಿ ಪ್ಲೆ ಕಾರ್ಡ್‌ ಹಿಡಿದುಕೊಂಡಿದ್ದ ವೇಳೆ ಸ್ಥಳಕ್ಕೆ ಬಂದ ಸಂಘಪರಿವಾರದ ಬೆಂಬಲಿಗನೋರ್ವ ಸ್ಥಳಕ್ಕೆ ಪೊಲೀಸರನ್ನು ಕರೆಸಿಕೊಂಡಿದ್ದಾನೆ.

ಬಳಿಕ ಸ್ಥಳಕ್ಕೆ ಬಂದ ಪೊಲೀಸರ ಮುಂದೆಯೇ ‘ಬೋಲೋ ಭಾರತ್ ಮಾತಾಕಿ’ ಎಂದು ಘೋಷಣೆ ಕೂಗಿದ್ದಲ್ಲದೇ, ‘ದೇಶದ್ರೋಹಿಗಳಿಗೆ ಧಿಕ್ಕಾರ’ ಎಂದು ನಿಂದಿಸಿದ್ದಾನೆ. ಅಲ್ಲದೇ, ಆತನ ವಿಡಿಯೋವನ್ನು ಕೂಡ ಪೊಲೀಸರು ಸೆರೆ ಹಿಡಿದಿದ್ದಾರೆ.

ಆದರೆ, ಆತನ ಮೇಲೆ ದೂರು ದಾಖಲಿಸಿಕೊಳ್ಳದ ಕಬ್ಬನ್ ಪಾರ್ಕ್ ಪೊಲೀಸರು, ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಪ್ಯಾಲೆಸ್ತೀನ್ ಪರವಾಗಿ ಪ್ರತಿಭಟನೆ ನಡೆಸಿದವರ ಮೇಲೆ ಎಫ್ಐಆರ್ ಹಾಕಿದ್ದಾರೆ.

ಸ್ಥಳದಲ್ಲಿ ಘೋಷಣೆ ಕೂಗಿದ ವ್ಯಕ್ತಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಈ ದಿನ.ಕಾಮ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಎಎಸ್‌ಐ ಅವರನ್ನು ಸಂಪರ್ಕಿಸಿದಾಗ, ‘ಘೋಷಣೆ ಕೂಗಿದವನ ಮೇಲೆ ದೂರು ದಾಖಲಾಗಿಲ್ಲ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...