‘ಪಿಕ್ಚರ್ ಇನ್ನೂ ಬಾಕಿ ಇದೆ’; ಎಚ್‌ಡಿಕೆ ವಿರುದ್ಧ ಮತ್ತೊಂದು ಪೋಸ್ಟರ್‌ ವೈರಲ್‌

Date:

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಇತ್ತೀಚೆಗಷ್ಟೇ ‘ಕರೆಂಟ್ ಕಳ್ಳ’ ಎಂಬ ಪೋಸ್ಟರ್‌ ವೈರಲ್‌ ಆಗಿತ್ತು. ಆಗ, ನಾನು ದಂಡ ಕಟ್ಟಿದ್ದೇನೆ. ನನ್ನನ್ನು ಕರೆಂಟ್ ಕಳ್ಳ ಎನ್ನುವುದನ್ನು ನಿಲ್ಲಿಸಿ ಎಂದು ಕುಮಾರಸ್ವಾಮಿ ಹೇಳಿದ್ದರು. ಇದೀಗ, ಮತ್ತೊಂದು ಪೋಸ್ಟರ್ ವೈರಲ್‌ ಆಗಿದ್ದು, ಬೆಂಗಳೂರಿನ ನಾನಾ ಭಾಗಗಳಲ್ಲಿ ಆ ಪೋಸ್ಟರ್‌ಅನ್ನು ಅಂಟಿಸಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರ ರಸ್ತೆ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಸಿನಿಮಾ ಮಾದರಿಯಲ್ಲಿ ಪೋಸ್ಟರ್‌ ಚಿತ್ರಿಸಿ, ಅಂಟಿಸಲಾಗಿದೆ. ‘ಪಿಕ್ಚರ್ ಇನ್ನೂ ಬಾಕಿ ಇದೆ’ ಎಂಬ ಶೀರ್ಷಿಕೆಯಲ್ಲಿ ಪೋಸ್ಟರ್‌ ನಿರ್ಮಿಸಲಾಗಿದೆ. ಪೋಸ್ಟರ್‌ ಅಂಟಿಸಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅವುಗಳನ್ನು ಅಂಟಿಸಿದ ಕಿಡಿಗೇಡಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ.

ಅಂಟಿಸಲಾದ ಪೋಸ್ಟರ್‌ನಲ್ಲಿ, “ಕರೆಂಟ್ ಕಳ್ಳ ಖ್ಯಾತಿಯ ಎಚ್​ಡಿಕೆ ನಿರ್ಮಾಣದ ಚಿತ್ರ ‘ಪೆನ್ ಡ್ರೈವ್ ಬ್ರದರ್’. ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ. ಬರೀ ಟೀಸರ್​ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ. ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ. ಚಿತ್ರದ ನಿರ್ಮಾಣದ ವೆಚ್ಚ 68,000” ಎಂದು ವ್ಯಂಗ್ಯವಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ‘ಕರೆಂಟ್‌ ಕಳ್ಳ’ ಪೋಸ್ಟರ್‌ ಅಭಿಯಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಕಾರಣವೆಂದು ಆರೋಪಿಸಿದ್ದರು. “ನನ್ನ ವಿರುದ್ಧ ಪೋಸ್ಟರ್ ಅಭಿಯಾನ ಮಾಡುತ್ತಿರುವವರು ಈ ಹಿಂದೆ ಟೆಂಟ್‌ಗಳಲ್ಲಿ ಬ್ಲೂ ಫಿಲಂಗಳನ್ನು ಜನರಿಗೆ ತೋರಿಸುತ್ತಿದ್ದರು. ಅವರಿಂದಲೇ ಇಂಥ ಪೋಸ್ಟರ್ ಅಭಿಯಾನ ನಡೆಯುತ್ತಿದೆ” ಎಂದು ಆರೋಪಿಸಿದ್ದರು.

ಅವರ ಈ ಹೇಳಿಕೆಯ ವಿರುದ್ಧ ಸಿಟ್ಟಿಗೆದ್ದಿರುವ ಕೆಲವರು ಈ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...