ಸಂವಿಧಾನ ವಿರೋಧಿಗಳಿಂದ ಸಂಸತ್ತಿನಲ್ಲಿ ಸಂವಿಧಾನ ಪ್ರತಿ ಹಿಡಿದು ಪ್ರತಿಭಟನೆ: ಸಂಸದ ಬೊಮ್ಮಾಯಿ

Date:

ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಿದ ಅವರು, “ದೇಶದಲ್ಲಿ ಯಾವ ಹಕ್ಕು ಹರಣವಾಗಿದೆ. ವ್ಯಕ್ತಿ ಸ್ವಾತಂತ್ರ್ಯಹರಣವಾಗಿದೆಯಾ, ಪತ್ರಿಕಾ ಸ್ವಾತಂತ್ರ್ಯವಾಗಿದೆಯಾ, ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಪ್ರಜಾಪಭುತ್ವ ಇದೆ ಎಂದರ್ಥ. ಇದೊಂದು ನೆಪ ಅವರಿಗೆ ಮತ್ತ ಬ್ಯಾಂಕ್‌ಗಳನ್ನು ಸೃಷ್ಟಿಸಲು ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

“ಕಳೆದ ಐವತ್ತು ವರ್ಷದಲ್ಲಿ ಪಜಾಪಮತ್ವ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪಭುತ್ವದ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಪಧಾನ ಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು. ಆಗ ಸರ್ಕಾರದ ವಿರುದ್ಧ ಯಾರೂ ಮಾತನಾಡುವಂತೆ ಮಾಡಿದರು. ಮಾನವ ಹಕ್ಕುಗಳು ಹಾಗೂ ರಾಜಕೀಯ ಸ್ವಾತಂತ್ರ್ಯ ಎರಡನ್ನೂ ಮೊಟಕುಗೊಳಿಸಲಾಗಿತ್ತು. ಮತ್ತು ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ತೆಗೆದು ಹಾಕಲಾಗಿತ್ತು. ಪತ್ರಿಕೆಗಳ ಮೇಲೆ ಸಂಪೂರ್ಣ ನಿಬಂರ್ಧ ಹೇರಲಾಗಿತ್ತು. ಏನಾದರೂ ಸುದ್ದಿ ಪ್ರಕಟಿಸಬೇಕೆಂದರೆ ಸರ್ಕಾರದ ಅನುಮತಿ ಪಡೆದು ಪ್ರಕಟಿಸಬೇಕಿತ್ತು” ಎಂದು ಹೇಳಿದರು.

“ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಡೀ ಸಂವಿಧಾನವನ್ನು ತಿರುಚಿ ಹಕ್ಕುಗಳನ್ನು ಮೊಟಕುಗೊಳಿಸಿದ್ದಂತಹ ಕಾಂಗ್ರೆಸ್ ಲೋಕಸಭೆಯಲ್ಲಿ ಸಂವಿಧಾನದ ಉಳಿವಿನ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ. ಅದೂ ಕೂಡ ಮೊಟಕುಗೊಳಿಸಿರುವ ಸಂವಿಧಾನ, ಸಂಪೂರ್ಣವಾದ ಸಂವಿಧಾನವಿಲ್ಲ. ಅವರು ಐವತ್ತು ವರ್ಷದ ಹಿಂದೆ ಇದೇ ಸಂವಿಧಾನವನ್ನು ನಾವು ತಿರುಚಿದ್ದೆವು. ಪ್ರಜಾಪ್ರಭುತ್ವದ ಕೊಲೆ ಮಾಡಿದ್ದೇವು ಎಂದು ನೆನಪು ಮಾಡಿಕೊಳ್ಳಬೇಕು. ಎಲ್ಲ ಹಕ್ಕುಗಳ ಹರಣ ಮಾಡಿದ್ದೇವೆ ಎಂದು ನೆನಪು ಮಾಡಿಕೊಳ್ಳದಿರುವುದು ಕಾಂಗ್ರೆಸ್ಸಿನ ಭಂಡತನ” ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...