ಮಂಡ್ಯ | ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು

Date:

ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಎಫ್‌ಐಆರ್‌ ದಾಖಲಾಗಿದೆ.

ಹೋರಾಟಗಾರ್ತಿ, ಜೆಡಿಎಸ್‌ ಮುಖಂಡೆ ನಜ್ಮಾ ನಝೀರ್ ಚಿಕ್ಕನೇರಳೆ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298 ಮತ್ತು 12ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಶ್ರೀರಂಗಪಟ್ಟಣದಲ್ಲಿ ಭಾನುವಾರ ನಡೆದ ಹನುಮ ಜಯಂತಿ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಭಾಕರ ಭಟ್ ವಿರುದ್ಧ ದೂರು ನೀಡಿರುವ ನಜ್ಮಾ, “ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನು ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿ ಸಾವು ನೋವುಗಳನ್ನು ಪ್ರಚೋದಿಸಿದ ವೃತ್ತಿಪರ ಕ್ರಿಮಿನಲ್ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ಕೈಗೊಳ್ಳುವಂತೆ” ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...