ಹುಲಿ ಅಭಯಾರಣ್ಯ: ಬಾಕಿ ಹಣ ಬಿಡುಗಡೆಗೆ ಕೇಂದ್ರ ಅರಣ್ಯ ಸಚಿವರಿಗೆ ಮನವಿ

Date:

  • ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ
  • ಹೊಸ ಕಾಮಗಾರಿಗಳ ಅನುಷ್ಠಾನಕ್ಕೆ ಹಣಕಾಸಿನ ಬೇಡಿಕೆ ಇಟ್ಟ ಅರಣ್ಯ ಸಚಿವ

ಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೇಂದ್ರ ಅರಣ್ಯ ಸಚಿವರಿಗೆ ಮನವಿ ಮಾಡಿದರು.

ದೆಹಲಿಯಲ್ಲಿಂದು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾದ ಈಶ್ವರ್ ಖಂಡ್ರೆ, 2022-23ನೇ ಸಾಲಿನಲ್ಲಿ ರಾಜ್ಯಕ್ಕೆ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂಪಾಯಿ ಬಾಕಿ ಬರಬೇಕಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಕೇಳಿಕೊಂಡರು.

ಭೇಟಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಈಶ್ವರ ಖಂಡ್ರೆ, “ಹುಲಿ ಯೋಜನೆಯಡಿ ಕಾಳಿ, ಭದ್ರಾ, ನಾಗರಹೊಳೆ, ಬಂಡಿಪುರ ಮತ್ತು ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು 61 ಕೋಟಿ ರೂಪಾಯಿ ಸೇರಿ ಒಟ್ಟಾರೆ ಸುಮಾರು 91.99 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಕೋರಿದ್ದು, ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಸುಳ್ಳು ಸುದ್ದಿಗೆ, ವದಂತಿಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಅರಣ್ಯ ರಕ್ಷಣೆ ಮತ್ತು ವಿಸ್ತರಣೆಗಾಗಿ ಕಾಂಪಾ ನಿಧಿಯಡಿ 2023-24ರ ಸಾಲಿನಲ್ಲಿ ರಾಜ್ಯದಿಂದ ಸುಮಾರು 362 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 140 ಕೋಟಿ ರೂ.ಗೆ ಮಾತ್ರ ಮಂಜೂರಾತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಳಿದ 222 ಕೋಟಿ ಬಾಕಿ ನಿಧಿಯ ಮಂಜೂರಾತಿಗೂ ಮನವಿ ಮಾಡಲಾಗಿದ್ದು, ಇದಕ್ಕೆ ಅಗತ್ಯವಾದ ಎಲ್ಲ ನಿಬಂಧನೆಗಳನ್ನೂ ಪೂರೈಸಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ ಎಂದರು.

ನಗರ -ವನ ಯೋಜನೆ ಅಡಿ ರಾಜ್ಯದ 9 ನಗರಗಳಿಗಾಗಿ 26 ಕೋಟಿ 70 ಲಕ್ಷ ರೂಪಾಯಿ ಯೋಜನೆ ಅನುಮೋದನೆ ನೀಡುವಂತೆಯೂ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದ್ದು, ಭೂಪೇಂದ್ರ ಯಾದವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...