ರಾಮಮಂದಿರಕ್ಕೆ ಮೊದಲು ದಲಿತ ಅರ್ಚಕರನ್ನು ನೇಮಿಸಿ: ಸಚಿವ ಕೆ ಎನ್ ರಾಜಣ್ಣ

Date:

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಇನ್ನೇನು ಕೆಲವೇ ದಿನಗಳು ಉಳಿದಿದೆ. ಇದರ ಬೆನ್ನಲ್ಲೇ, “ರಾಮಮಂದಿರಕ್ಕೆ ಮೊದಲು ದಲಿತರನ್ನು ಬಿಟ್ಟುಕೊಂಡು, ದಲಿತ ಅರ್ಚಕರನ್ನು ನೇಮಿಸಿ” ಎಂದು ಸಹಕಾರ ಸಚಿವ ರಾಜಣ್ಣ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿಂದು ಹೈಕಮಾಂಡ್ ನಾಯಕರ ಭೇಟಿಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ, ‘ರಾಮಮಂದಿರ ಲೋಕಾರ್ಪಣೆಯಾದ ಮೇಲೆ ರಾಮಮಂದಿರಕ್ಕೆ ಹೋಗುತ್ತೇವೆ’ ಎಂದು ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಬಿಜೆಪಿಗರು ಹಿಂದೂಗಳನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ, ಜಾಗೀರು ಕೊಡಲಾಗಿದೆಯಾ” ಎಂದು ಪ್ರಶ್ನಿಸಿದ್ದಾರೆ.

“ವೋಟಿಗಾಗಿ ಪದೇಪದೆ ಹಿಂದೂ ಹಿಂದೂ ಎಂದು ಬಿಜೆಪಿ ಜಪ ಮಾಡುತ್ತಿದೆ. ಡಾ.ಬಿ.ಆರ್​ ಅಂಬೇಡ್ಕರ್ ಅವರು ಹಿಂದೂವಾಗಿ ಸಾಯುವುದಿಲ್ಲ ಎಂದಿದ್ದೇಕೆ? ಹಿಂದೂಗಳು ತಮ್ಮ ಸ್ವಾರ್ಥಕ್ಕೆ ಎಲ್ಲ ಬಳಕೆ ಮಾಡಿಕೊಳ್ಳುತ್ತಾರೆ ಎಂದು ಈ ರೀತಿ ತಿಳಿಸಿದ್ದರು. ರಾಮಮಂದಿರಕ್ಕೆ ಮೊದಲು ದಲಿತರನ್ನು ಬಿಡಿ, ಅಲ್ಲಿ ಒಬ್ಬ ದಲಿತ ಅರ್ಚಕನನ್ನು ನೇಮಿಸಲು ಹೇಳಿ. ದಲಿತರು ಹಿಂದೂಗಳಿಗೆ ಏನು ಮಾಡಿದ್ದಾರೆ” ಎಂದು ಪ್ರಶ್ನೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸೋಷಿಯಲ್ ಮೀಡಿಯಾದಲ್ಲಿ ಸಿಎಂ, ಸಿಎಂ ಪತ್ನಿಯ ಅವಾಚ್ಯ ನಿಂದನೆ: ಎಫ್‌ಐಆರ್ ದಾಖಲು

ಇದೇ ವೇಳೆ, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ನಾನು, ಹೆಚ್​.ಸಿ ಮಹದೇವಪ್ಪ, ಈಶ್ವರ್ ಖಂಡ್ರೆ ಸೇರಿ ಐವರು ಸಚಿವರು ಸೇರಿ ಭೇಟಿಯಾಗಿದ್ದೇವೆ. ಲೋಕಸಭಾ ಎಲೆಕ್ಷನ್​ ಕುರಿತು ನಮ್ಮಲ್ಲಿ ಉತ್ಸಾಹ ಇನ್ನಷ್ಟು ಇಮ್ಮಡಿಗೊಂಡಿದ್ದು ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲಬೇಕಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...