ನಿಗಮ, ಮಂಡಳಿಗಳಿಗೆ 36 ಶಾಸಕರು, 39 ಕಾರ್ಯಕರ್ತರ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್

Date:

“ನಿಗಮ, ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳು, ನಿಗಮ ಮಂಡಳಿ ನೇಮಕದ ಬಗ್ಗೆ ಗುರುವಾರ ಕೇಳಿದಾಗ ಶಿವಕುಮಾರ್ ಈ ಮಾಹಿತಿ ಹಂಚಿಕೊಂಡಿದ್ದಾರೆ.

“ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ನಾಳೆ ಸಂಜೆ 4.30ಕ್ಕೆ ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಸಲಾಗುವುದು. ಮೊದಲಿಗೆ ಮಧ್ಯಾಹ್ನ ಸಭೆ ಮಾಡಲು ಆಲೋಚನೆ ಮಾಡಿದ್ದೆವು. ಪ್ರಧಾನ ಮಂತ್ರಿಗಳು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಭೆಯನ್ನು ಸಂಜೆ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ನಾಳೆ ಅಭ್ಯರ್ಥಿಗಳ ಆಯ್ಕೆ ಅಂತಿಮ ಆಗುತ್ತದೆಯೇ ಎಂದು ಕೇಳಿದಾಗ, “ನಾಳೆ ಮೊದಲ ಸುತ್ತಿನ ಚರ್ಚೆ ನಡೆಯಲಿದೆ. ಈ ಸಭೆಗೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಆಹ್ವಾನಿಸಲಾಗಿದ್ದು, ಉಳಿದಂತೆ ಈ ಹಿಂದೆ ಚುನಾವಣಾ ಸಮಿತಿಯಲ್ಲಿದ್ದವರೇ ಇದ್ದಾರೆ. ಸಚಿವರು ಎಲ್ಲಾ ಕ್ಷೇತ್ರಗಳಿಗೆ ಹೋಗಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಯಲಿದೆ” ಎಂದು ತಿಳಿಸಿದರು.

ಕೆಲ ಸಚಿವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಪಕ್ಷ ಸೂಚಿಸಿದರೆ ನಾನು ನಿಲ್ಲಬೇಕು, ಅವರೂ ನಿಲ್ಲಬೇಕು” ಎಂದು ತಿಳಿಸಿದರು.

25ಕ್ಕೂ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ

ಜೆಡಿಎಸ್ ಎನ್‌ಡಿಎ ಜತೆ ಮೈತ್ರಿಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಅದು ಅವರ ಇಚ್ಛೆ. ನಾವು ಕೂಡ ಹಿಂದೆ ಅವರ ಜತೆಗೂಡಿದಾಗ ಹೆಚ್ಚಿನ ಕ್ಷೇತ್ರ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ ಅಂತಿಮವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದೊಂದು ಕ್ಷೇತ್ರ ಮಾತ್ರ ಗೆಲ್ಲಲು ಸಾಧ್ಯವಾಯಿತು. ಈ ಬಾರಿ ಏನಾಗುತ್ತದೆ ಎಂದು ಕಾದು ನೋಡೋಣ. ನಾವು 25 ಕ್ಕೂ ಹೆಚ್ಚು ಸೀಟು ಗೆಲ್ಲುವ ವಿಶ್ವಾಸವಿದೆ” ಎಂದು ತಿಳಿಸಿದರು.

ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಪಕ್ಷಕ್ಕೆ ಹಿನ್ನಡೆ ತರಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರ ಹೆಸರಿನಲ್ಲೇ ರಾಮನಿದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ಧರ್ಮ ನಮ್ಮ ವೈಯಕ್ತಿಕ ವಿಚಾರ. ನಾನು ಎಲ್ಲ ಧರ್ಮ, ಸಮುದಾಯಗಳ ಮೇಲೆ ನಂಬಿಕೆ ಇಟ್ಟಿದ್ದು, ನಮ್ಮ ಧರ್ಮದ ಆಚರಣೆ ಬಗ್ಗೆಯೂ ನಂಬಿಕೆ ಇದೆ. ರಾಮ ಮಂದಿರ ವಿಚಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ. ಒಂದು ವಿಚಾರ ಸ್ಪಷ್ಟಪಡಿಸುತ್ತೇನೆ, ರಾಜಕೀಯದಲ್ಲಿ ಧರ್ಮ ಇರಬೇಕೇ ವಿನಃ ಧರ್ಮದಲ್ಲಿ ರಾಜಕೀಯ ಇರಬಾರದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...