75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಸಿದ್ಧವೇ: ಮೋದಿಗೆ ರೇವಂತ್ ರೆಡ್ಡಿ ಪ್ರಶ್ನೆ

Date:

ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಯ ನಿವೃತ್ತಿ ವಯಸ್ಸನ್ನು 75 ವರ್ಷ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ. ಇದು ಅವರಿಗೂ ಅನ್ವಯವಾಗುತ್ತದೆಯೇ ಮತ್ತು ತನ್ನ 75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಮೋದಿ ಅವರು ಸಿದ್ಧವೇ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಶ್ನಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ನಿವೃತ್ತಿ ಪಡೆಯಲು 75 ವರ್ಷ ಎಂದು ಮೋದಿ ಅವರೇ ನಿರ್ಧರಿಸಿದ್ದಾರೆ. ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಹಲವಾರು ಹಿರಿಯ ಬಿಜೆಪಿ ನಾಯಕರ ವಿರುದ್ಧವಾಗಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ರೇವಂತ್ ರೆಡ್ಡಿ ಆರೋಪಿಸಿದರು.

ಇದನ್ನು ಓದಿದ್ದೀರಾ?  ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಪ್ರಧಾನಿ ನರೇಂದ್ರ ಮೋದಿ ಅವರೇ 74 ವರ್ಷವನ್ನು ದಾಟುತ್ತಿದ್ದಾರೆ. ಅವರಿಗೆ 75 ವರ್ಷವಾಗಲು ಇನ್ನು ಒಂದು ವರ್ಷಗಳ ಕಾಲ ಮಾತ್ರ ಬಾಕಿ ಉಳಿದಿದೆ. ಈಗ ನಾನು ಪ್ರಧಾನಿ ಮೋದಿ ಬಳಿ ಅದೇ ಪ್ರಶ್ನೆಯನ್ನು ಕೇಳಲು ಬಯಸುತ್ತೇನೆ. ನೀವು ನಿಮ್ಮ 75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಸಿದ್ಧರಾಗಿದ್ದೀರಾ” ಎಂದು ಪ್ರಶ್ನಿಸಿದರು.

ಇನ್ನು ಪ್ರಧಾನಿ ಮೋದಿ ಅವರ ಆರ್ಥಿಕ ನೀತಿ ಬಗ್ಗೆಯೂ ಸಿಎಂ ರೇವಂತ್ ರೆಡ್ಡಿ ಪ್ರಶ್ನಿಸಿದ್ದಾರೆ. “ಇನ್ನೂ ಒಂದು ವಿಷಯವನ್ನು ನೆನಪಿಸಬಯಸುತ್ತೇನೆ, 1947ರಿಂದ 2014ರವರೆಗೆ 14 ಪ್ರಧಾನಿಗಳು ಸುಮಾರು 67 ವರ್ಷಗಳ ಕಾಲ 55 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಪ್ರಧಾನಿ ಮೋದಿ ತನ್ನ ಹತ್ತು ವರ್ಷದ ಅವಧಿಯಲ್ಲಿ 113 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅದನ್ನು ಮರೆಮಾಚಲು ಯಾವ ದಾಖಲೆಯನ್ನು ಸಲ್ಲಿಸಿದರೂ ನಾವು ನಂಬಲಾರೆವು. ಚುನಾವಣೆಯಲ್ಲಿ ಗೆಲ್ಲಲು ಮೋದಿ ಯಾವ ಹಂತಕ್ಕಾದರೂ ಇಳಿಯಬಹುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ₹3 ಕೋಟಿ ಬೆಲೆಯ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

ಇದಕ್ಕೂ ಮುನ್ನ ಸಿಎಂ ರೇವಂತ್ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮೋದಿ ಮಾತನಾಡಿದ್ದರು. ರಾಜ್ಯದ ಜನರು ಡಬಲ್ ಆರ್‌ (ಆರ್‌ಆರ್‌ ತೆರಿಗೆ) ತೆರಿಗೆಯ ಹೊರೆ ಹೊರಬೇಕಾಗಿದೆ ಎಂದು ಟೀಕಿಸಿದ್ದರು.

ತೆಲಂಗಾಣದ ಎಲ್ಲ 17 ಲೋಕಸಭಾ ಕ್ಷೇತ್ರಗಳಲ್ಲಿ ಮೇ 13ರಂದು ನಾಲ್ಕನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...