ದರೋಡೆಕೋರರ ಕೈಯಲ್ಲಿ ಶಸ್ತ್ರಾಸ್ತ್ರ, ಆತಂಕದಲ್ಲಿ ಜನ: ಸರ್ಕಾರದ ಆರ್‌ ಅಶೋಕ್‌ ವಿರುದ್ಧ ವಗ್ದಾಳಿ

Date:

ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆ‌ರೋಪಿಸಿದರು.

ವಿಧಾನಸೌಧದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೀದರ್‌ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್‌ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್‌ ಹಣ ಲೂಟಿಯಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್‌ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. ರಾಜ್ಯದ ಕಾನೂನು ವ್ಯವಸ್ಥೆ ಎಷ್ಟು ಹದಗೆಟ್ಟಿದೆ” ಎಂದರು.

“ಬೇರೆ ರಾಜ್ಯಗಳಿಂದ ಕಳ್ಳರು ಬಂದು ದರೋಡೆ ಮಾಡಿಕೊಂಡು ಬಸ್ಸು, ರೈಲಿನಲ್ಲಿ ಹೋಗುತ್ತಿದ್ದಾರೆ. ಜನರು ಅವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪೊಲೀಸರ ಕೈಯಲ್ಲಿ ಪಿಸ್ತೂಲ್‌ ಇಲ್ಲ. ಆದರೆ ದರೋಡೆ ಮಾಡುವವರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿವೆ. ಲವ್‌ ಜಿಹಾದ್‌, ಕೋಮುಗಲಭೆ, ಹಸುಗಳ ಕೆಚ್ಚಲು ಕತ್ತರಿಸಿದ್ದು ಮೊದಲಾದ ಘಟನೆಗಳ ವಿರುದ್ಧ ಕಠಿಣ ಕ್ರಮ ವಹಿಸಲಿಲ್ಲ. ಪೊಲೀಸ್‌ ಇಲಾಖೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಅಧಿಕಾರಿಗಳು ಸಾಯುತ್ತಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಯ ಸಭೆ ಕರೆದು ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್‌-ಸತೀಶ್‌ ಜಾರಕಿಹೊಳಿ ಗಲಾಟೆ, ಸಿಎಂ ನಿರ್ಗಮನ ಮೊದಲಾದ ರಾಜಕೀಯದಲ್ಲೇ ಸರ್ಕಾರ ಮುಳುಗಿದೆ. ಹೀಗಾಗಿ ಅಧಿಕಾರಿಗಳಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ದರೋಡೆಕೋರರ ಸ್ವರ್ಗವಾಗಿರುವುದರಿಂದ ಹೂಡಿಕೆದಾರರು ಮುಂದೆ ಬರುತ್ತಿಲ್ಲ. ಇದು ಪಶ್ಚಿಮ ಬಂಗಾಳದಂತೆಯೇ ಆಗುತ್ತಿದೆ. ಎಲ್ಲರೂ ಆತಂಕದಲ್ಲೇ ಬದುಕುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಶ್ವೇತಪತ್ರ ಬಿಡುಗಡೆ ಮಾಡಿ

“ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ, ಸಿಎಂ ಸಿದ್ದರಾಮಯ್ಯ ಎಷ್ಟು ಅನುದಾನ ನೀಡಿದ್ದಾರೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ. ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ, ಕಾಂಗ್ರೆಸ್‌ ಅವಧಿಯಲ್ಲಿ 60 ವರ್ಷಗಳಲ್ಲಿ ಎಷ್ಟು ಸಾಲ ಮಾಡಲಾಗಿದೆ ಎಂದು ಕೂಡ ತಿಳಿಸಲಿ” ಎಂದು ಸವಾಲೆಸೆದರು.

ಕ್ಲೀನ್‌ಚಿಟ್‌ಗೆ ಸಿದ್ಧತೆ

“ಮುಡಾಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ನನಗೆ ಉತ್ತರ ನೀಡಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ಮಾಡಲು ಆಸಕ್ತಿ ತೋರದೆ ಕ್ಲೀನ್‌ಚಿಟ್‌ ನೀಡಲು ಸಿದ್ಧತೆ ಮಾಡಿಕೊಂಡಿರುವಂತಿದೆ. ಜಾರಿ ನಿರ್ದೇಶನಾಲಯ ಮಧ್ಯವರ್ತಿಗಳ ಹಣವನ್ನು ವಶಕ್ಕೆ ಪಡೆದಿದೆ. ಆದರೆ ಲೋಕಾಯುಕ್ತ ಪೊಲೀಸರು ಏನೂ ಮಾಡಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದ್ದೇವೆ” ಎಂದರು.

“ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಹೆಚ್ಚಿವೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಬದುಕಿಗೆ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ದರ ಏರಿಕೆ ಮಾಡುತ್ತಿದೆ. ಈ ರೀತಿ ಮಾಡುವ ಬದಲು ಒಂದೇ ಬಾರಿಗೆ ದರ ಏರಿಕೆ ಮಾಡಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...