ಕರಸೇವಕರ ಬಂಧನ ಪ್ರಕರಣ | ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ: ಡಿ ಕೆ ಶಿವಕುಮಾರ್

Date:

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ, “ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದರು.

“ಬಿಜೆಪಿ ಅವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ” ಎಂದು ತಿರುಗೇಟು ನೀಡಿದರು.

ನಿಮ್ಮ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ನೀಡಿದ್ದು, ತನಿಖೆ ಆರಂಭವಾಗಿರುವ ಬಗ್ಗೆ ಕೇಳಿದಾಗ, “ನನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...