ಕೇಜ್ರಿವಾಲ್ ಬಂಧನ | ಪ್ರಜಾಪ್ರಭುತ್ವದಲ್ಲಿ ಮತ್ತೊಂದು ಕರಾಳ ದಿನ: ಕೆಸಿಆರ್

Date:

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಸಂಬಂಧ ಕೇಂದ್ರ ವಿರುದ್ಧ ಬಿಆರ್‌ಎಸ್‌ ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಾಗ್ದಾಳಿ ನಡೆಸಿದ್ದಾರೆ. ‘ಇದು ಪ್ರಜಾಪ್ರಭುತ್ವದ ಮೊತ್ತೊಂದ ಕರಾಳ ದಿನ’ ಎಂದು ಕರೆದಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಪುತ್ರಿ, ಎಂಎಲ್‌ಸಿ ಕೆ ಕವಿತಾ ಬಂಧನ ವಿಚಾರವಾಗಿ ಕೆಸಿಆರ್ ಮೌನವಾಗಿದ್ದರು. ಇದೀಗ, ಕೇಜ್ರಿವಾಲ್ ಬಂಧನದ ಬಳಿಕ ಮೌನ ಮುರಿದಿದ್ದಾರೆ. “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳನ್ನು ತೊಡೆದುಹಾಕುವ ಏಕೈಕ ಉದ್ದೇಶದಿಂದ ಕೆಲಸ ಮಾಡುತ್ತಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಮತ್ತು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಬಂಧನಗಳು ಇದನ್ನೇ ಸೂಚಿಸುತ್ತವೆ” ಎಂದು ಹೇಳಿದ್ದಾರೆ.

“ಕೇಂದ್ರದ ಬಿಜೆಪಿ ಸರ್ಕಾರವು ದೇಶದ ವಿರೋಧ ಪಕ್ಷಗಳನ್ನು ನಿರ್ಮೂಲನೆ ಮಾಡಲು ಕೇಂದ್ರೀಯ ಸಂಸ್ಥೆಗಳಾದ ಇಡಿ, ಸಿಬಿಐ ಮತ್ತು ಐಟಿಗಳನ್ನು ಪ್ಯಾದೆಯಾಗಿ ಬಳಸುತ್ತಿದೆ. ದೇಶದ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬಿಜೆಪಿಯ ಕೃತ್ಯಗಳನ್ನು ಬಿಆರ್‌ಎಸ್ ಖಂಡಿಸುತ್ತದೆ” ಎಂದು ಕೆಸಿಆರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಜ್ರಿವಾಲ್ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಅವರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಕೈಬಿಡಬೇಕು. ಬಂಧಿಸಿರುವವರನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿ ಮತ್ತು ಅದರ ನೀತಿಗಳನ್ನು ವಿರೋಧಿಸಿದ್ದರಿಂದ ಕವಿತಾ ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕುವ ಮೂಲಕ ಇಡಿ ಬಂಧಿಸಿದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ವಿರುದ್ಧ ಇದ್ದುದರಿಂದಲೇ ತಮ್ಮ ಮಗಳನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ, ಇಡಿ ತಮ್ಮ ಮಗಳನ್ನು ಬಂಧಿಸುತ್ತಿರಲಿಲ್ಲ” ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...