ಉದ್ಯೋಗ ಕೊಡಿ ಎಂದು ಪ್ರತಿಭಟಿಸಿದ ಯುವಜನರ ಬಂಧನ: AIDYO ಖಂಡನೆ

Date:

ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನರ ಮೇಲೆ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(AIDYO) ಖಂಡಿಸಿದೆ. ಈ ಕೂಡಲೇ ಹೋರಾಟ ಸಮಿತಿಯ ಮುಖಂಡರನ್ನು ಹಾಗೂ ಉದ್ಯೋಗ ಆಕಾಂಕ್ಷಿಗಳನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ AIDYO, ಕೇಂದ್ರ ಮತ್ತು ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ನೇಮಕಾತಿಯಲ್ಲಿ ಅಕ್ರಮ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಪಾರದರ್ಶಕ ನೇಮಕಾತಿ ಮಾಡಬೇಕು ಹಾಗೂ ಎಲ್ಲಾ ನೇಮಕಾತಿಯಲ್ಲಿ ಐದು ವರ್ಷ ವಯೋಮಿತಿಯನ್ನು ಹೆಚ್ಚಿಸಬೇಕು ಎಂಬ ಇನ್ನಿತರ ಹಲವು ನ್ಯಾಯಯುತ ಹಾಗೂ ಪ್ರಜತಾಂತ್ರಿಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಜನಸಾಮಾನ್ಯರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹೊರಟಿದ್ದರು. ಈ ಸಮಸ್ಯೆಗಳ ಪರಿಹಾರಕ್ಕಾಗಿ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿ ಯುವಜನರ ಮೇಲೆ ಲಾಠಿಚಾರ್ಜ್ ನಡೆಸಿ ಅವರನ್ನು ಬಂಧಿಸಿರುವುದು ಹೋರಾಟವನ್ನು ಧಮನ ಮಾಡುವ ಕ್ರಮ ಎಂದು ದೂರಿದೆ.

ಇದನ್ನು ಓದಿದ್ದೀರಾ? ದಾವಣಗೆರೆ | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಖಂಡನೆ; ದೇಶಾದ್ಯಂತ ಉಪವಾಸ ಸತ್ಯಾಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಹತ್ತು ವರ್ಷಗಳಿಂದ ಯಾವುದೇ ನೇಮಕಾತಿಗಳನ್ನು ಮಾಡದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಯ ತಳ್ಳುವ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ ತಾನು ಅಧಿಕಾರಕ್ಕೆ ಬಂದರೆ ಒಂದು ಲಕ್ಷ ಉದ್ಯೋಗ ಭರ್ತಿ ಮಾಡುವ ವಾಗ್ದಾನ ನೀಡಿದ್ದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದರೂ ಯಾವುದೇ ನೇಮಕಾತಿಗೆ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರ ಸರ್ಕಾರವು ಸಹ ಕಾಲ ಕಾಲಕ್ಕೆ ನೇಮಕಾತಿ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

youths arrest1

ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ಹಲವಾರು ವರ್ಷಗಳಿಂದ ಗ್ರಂಥಾಲಯಗಳಲ್ಲಿ ಕುಳಿತು ಓದಿ, ತರಬೇತಿಗಳನ್ನು ಪಡೆದು ಸಾವಿರಾರು ರೂಪಾಯಿಗಳ ಸಾಲಗಳನ್ನು ಮಾಡಿಕೊಂಡು ಮಾನಸಿಕವಾಗಿ ಜರ್ಜರಿತವಾಗಿದ್ದಾರೆ. ಆದರೆ ವಿವಿಧ ರೀತಿಯ ನೆಪಗಳನ್ನು ಮುಂದೆ ಮಾಡಿ ನೇಮಕಾತಿಗಳ ಅಧಿಸೂಚನೆಯನ್ನು ಹೊರಡಿಸದೆ, ಉದ್ಯೋಗ ಆಕಾಂಕ್ಷಿಗಳಿಗೆ ನಿರಾಶೆಯನ್ನುಂಟುಮಾಡಿದೆ. ಸರ್ಕಾರಗಳ ಈ ನೀತಿಯ ವಿರುದ್ಧ ಉದ್ಯೋಗ ಆಕಾಂಕ್ಷಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಅವರ ಮೇಲೆ ಲಾಠಿ ಬೀಸಿ, ಬಂಧಿಸಿರುವ ಕ್ರಮವು ಅತ್ಯಂತ ಜನತಾಂತ್ರಿಕ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದೆ.

ಈ ಕೂಡಲೇ ಬಂಧಿಸಿರುವ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮತ್ತು ಜನಸಾಮಾನ್ಯರ ವೇದಿಕೆಯ ಮುಖಂಡರನ್ನು ಹಾಗೂ ಉದ್ಯೋಗ ಅಕಾಂಕ್ಷಿಗಳನ್ನು ಕೂಡಲೇ ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...