ಗೋಬಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ಖಾದ್ಯಗಳಲ್ಲಿ ಕೃತಕ ಬಣ್ಣ ನಿಷೇಧ: ಸಚಿವ ಗುಂಡೂರಾವ್

Date:

ಗೋಬಿ ಮಂಚೂರಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಬೀದಿ ಬದಿಯ ತಳ್ಳು ಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚ ತಾರಾ ಹೋಟೆಲ್‌ವರೆಗೂ ಆದೇಶ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಂಡ ಮತ್ತು ಜೈಲು ವಾಸವನ್ನೂ ಅನುಭವಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಬಣ್ಣ ಬಳಸಿ ಮಾಡಿದ ಕಾಟನ್‌ ಕ್ಯಾಂಡಿಗಳನ್ನು ನಿಷೇಧಿಸಲಾಗುವುದು. ಬಣ್ಣ ರಹಿತ ಕಾಟನ್‌ ಕ್ಯಾಂಡಿ ತಯಾರಿಕೆಗೆ ನಿರ್ಬಂಧ ಇರುವುದಿಲ್ಲ. ಕಾಟನ್‌ ಕ್ಯಾಂಡಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್‌–ಬಿಯನ್ನು ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಹಾರಗಳ ಮೇಲೆ ನಿಷೇಧ ಇಲ್ಲ

“ಗೋಬಿ ಮಂಚೂರಿ ಸೇರಿ ಯಾವುದೇ ಆಹಾರಗಳ ಮೇಲೆ ನಿಷೇಧ ವಿಧಿಸುವುದಿಲ್ಲ. ಆದರೆ ಇವುಗಳಿಗೆ ಬಳಸುವ ಕೃತಕ ಬಣ್ಣ ಮತ್ತು ರುಚಿಯನ್ನು ವರ್ಧಿಸಲು ಬಳಸುವ ರಾಸಾಯನಿಕಗಳನ್ನು ಬಳಸುವುದನ್ನು ನಿರ್ಬಂಧಿಸಲಾಗುವುದು. ಇವೆಲ್ಲ ಆಹಾರ ಪದಾರ್ಥಗಳಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಸಾರ್ವಜನಿಕರೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಿಯಮಿತವಾಗಿ ಎಲ್ಲ ರೀತಿಯ ಹೋಟೆಲ್‌ಗಳು, ಬೀದಿ ಬದಿ ತಳ್ಳುಗಾಡಿಗಳಲ್ಲಿನ ಆಹಾರ ಪದಾರ್ಥಗಳನ್ನು ಪರೀಕ್ಷೆ ನಡೆಸುತ್ತದೆ. ಈ ಕಾರ್ಯಕ್ಕಾಗಿ ಹೆಚ್ಚಿನ ಸಿಬ್ಬಂದಿ ನೇಮಿಸಿಕೊಳ್ಳಲಾಗುವುದು. ಇದಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ” ಎಂದು ವಿವರಿಸಿದರು.

ರೋಡಮೈನ್‌–ಬಿ ಗೆ ಅಪಾಯಕಾರಿ

“ಕಾಟನ್‌ ಕ್ಯಾಂಡಿಯಲ್ಲಿ ಬಳಸುವ ರೋಡಮೈನ್‌–ಬಿ ಅತ್ಯಂತ ಅಪಾಯಕಾರಿ. ದಟ್ಟ ಗುಲಾಬಿ ಅಥವಾ ಇತರ ಬಣ್ಣ ನೀಡುವುದಕ್ಕಾಗಿ ಇದನ್ನು ಬಳಸುತ್ತಾರೆ. ಇದು ಕ್ಯಾನ್ಸರ್‌ಗೆ ಕಾರಣವಾಗುವುದರ ಜತೆಗೆ ಮಿದುಳು, ಮೂತ್ರಪಿಂಡ, ಹೃದಯಕ್ಕೂ ಹಾನಿ ಮಾಡಬಲ್ಲದು. ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕಾಗಿ ಬಳಸುವ ಟಾರ್‌ ಟ್ರಾಸೈನ್‌, ಸನ್‌ಸೆಟ್‌ ಯೆಲ್ಲೊ ಮತ್ತು ಕಾರ್ಮೊಸಿನ್‌ ಕೂಡ ಆರೋಗ್ಯಕ್ಕೆ ಅಪಾಯಕಾರಿ” ಎಂದು ಹೇಳಿದರು.

ಕೃತಕ ಬಣ್ಣ ಬಳಸಿದರೆ ಶಿಕ್ಷೆ ಏನು?

“ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006 ರ ನಿಯಮ 59 ರಡಿ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಬಹುದು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...