ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ತಡೆ: ‘ಸರ್ವಾಧಿಕಾರ’ ಹೆಚ್ಚುತ್ತಿದೆ ಎಂದ ಪತ್ನಿ ಸುನಿತಾ

Date:

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆಯೊಡ್ಡಿದ ಬೆನ್ನಲ್ಲೇ “ಸರ್ವಾಧಿಕಾರ ಹೆಚ್ಚುತ್ತಿದೆ” ಎಂದು ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಹೇಳಿದ್ದಾರೆ.

ಹಾಗೆಯೇ ಜಾಮೀನು ಮಂಜೂರು ಮಾಡಿದ ತೀರ್ಪುನ್ನು ಪ್ರಶ್ನಿಸಿದ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವನ್ನು ಸುನಿತಾ ಟೀಕಿಸಿದ್ದಾರೆ. ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ ಆದೇಶವನ್ನು ರದ್ದುಗೊಳಿಸುವಂತೆ ಇಡಿ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದೆ. ಅರ್ಜಿಯನ್ನು ತ್ವರಿತವಾಗಿ ಆಲಿಸಲು ಸಮ್ಮತಿಸಿದ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ತೀರ್ಪಿಗೆ ತಡೆಯೊಡ್ಡಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್, “ಆದೇಶವನ್ನು ಅಪ್‌ಲೋಡ್ ಮಾಡುವ ಮುನ್ನವೇ ಇಡಿ ಜಾಮೀನನ್ನು ವಿರೋಧಿ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಸರ್ಕಾರ ಮತ್ತು ಅದರ ಕೇಂದ್ರೀಯ ಸಂಸ್ಥೆಗಳು ನನ್ನ ಪತಿಯನ್ನು ವಾಂಟೆಡ್ ಭಯೋತ್ಪಾದಕನಂತೆ ನಡೆಸಿಕೊಳ್ಳುತ್ತಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಅಬಕಾರಿ ನೀತಿ ಪ್ರಕರಣ| ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ

“ಅರವಿಂದ್ ಕೇಜ್ರಿವಾಲ್ ಅವರನ್ನು ಮೋಸ್ಟ್ ವಾಂಟೆಡ್ ಟೆರರಿಸ್ಟ್ ಎಂಬಂತೆ ನೋಡಲಾಗುತ್ತಿದೆ. ದೇಶದಲ್ಲಿ ಸರ್ವಾಧಿಕಾರ ಹೆಚ್ಚಿದೆ. ಹೈಕೋರ್ಟ್‌ನಲ್ಲಿ ಇನ್ನೂ ನಿರ್ಧಾರ ಬರಬೇಕಿದೆ. ಹೈಕೋರ್ಟ್ ನ್ಯಾಯ ಒದಗಿಸಲಿದೆ ಎಂದು ನಾವು ಭಾವಿಸುತ್ತೇವೆ” ಎಂದು ಸುನಿತಾ ಕೇಜ್ರಿವಾಲ್ ಹೇಳಿದ್ದಾರೆ.

ಇನ್ನು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಜಾಮೀನು ಆದೇಶವನ್ನು ತಡೆಹಿಡಿಯುವ ದೆಹಲಿ ಹೈಕೋರ್ಟ್‌ನ ನಿರ್ಧಾರವನ್ನು ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ನ್ಯಾಯ ವ್ಯವಸ್ಥೆಯನ್ನು ಅಣಕಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ಸಿಂಗ್, “ಮೋದಿ ಸರ್ಕಾರದ ಗೂಂಡಾಗಿರಿ ನೋಡಿ, ವಿಚಾರಣಾ ನ್ಯಾಯಾಲಯದ ಆದೇಶ ಇನ್ನೂ ಬಂದಿಲ್ಲ, ಆದೇಶದ ಪ್ರತಿ ಕೂಡ ಬಂದಿಲ್ಲ. ಆದ್ದರಿಂದ ಮೋದಿ ಅವರ ಇಡಿ ಹೈಕೋರ್ಟ್‌ಗೆ ತಲುಪಿದೆಯೆ? ಈ ದೇಶದಲ್ಲಿ ಏನಾಗುತ್ತಿದೆ” ಎಂದು ಪ್ರಶ್ನಿಸಿದದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...