ಕೇಜ್ರಿವಾಲ್‌ ಪ್ರಧಾನಿ ಅಭ್ಯರ್ಥಿ: ಮುಂಬೈ ‘ಇಂಡಿಯಾ’ ಸಭೆಗೂ ಮುನ್ನ ಎಎಪಿ ನಾಯಕರ ಇಂಗಿತ

Date:

ಮುಂಬೈನಲ್ಲಿ ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಸಭೆ ಆರಂಭವಾಗುವ ಒಂದು ದಿನ ಮೊದಲೇ ಒಕ್ಕೂಟದ ಪ್ರಮುಖ ಪಕ್ಷವಾದ ಎಎಪಿಯು ತಮ್ಮ ನಾಯಕ ಅರವಿಂದ್‌ ಕೇಜ್ರೀವಾಲ್‌ ‘ಇಂಡಿಯಾ’ ವತಿಯಿಂದ ಪ್ರಧಾನಿಯಾಗಲು ಅರ್ಹರು ಎಂದು ತಿಳಿಸಿದೆ.

ಎಎಪಿಯ ಕೆಲವು ನಾಯಕರು ಬುಧವಾರ (ಆಗಸ್ಟ್‌ 30) ಅರವಿಂದ್‌ ಕೇಜ್ರೀವಾಲ್‌ ಅವರನ್ನು ಪ್ರತಿಪಕ್ಷದ ‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಬಯಸುವುದಾಗಿ ತಿಳಿಸಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬ ಪ್ರಶ್ನೆಗೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಎಎಪಿಯ ಮುಖ್ಯ ರಾಷ್ಟ್ರೀಯ ವಕ್ತಾರರಾದ ಪ್ರಿಯಾಂಕಾ ಕಕ್ಕರ್, “ನೀವು ನನ್ನನ್ನು ಕೇಳಿದರೆ, ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷದ ಮೈತ್ರಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಅರವಿಂದ್‌ ಕೇಜ್ರಿವಾಲ್‌ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿದ್ದಾರೆ. ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲಾಗಿ ಹೊರಹೊಮ್ಮಿದ್ದಾರೆ. ಪ್ರಧಾನಿಯವರ ಶೈಕ್ಷಣಿಕ ದಾಖಲೆಗಳು ಅಥವಾ ವಿದ್ಯಾರ್ಹತೆಗಳು ಅಥವಾ ಯಾವುದೇ ಸಮಸ್ಯೆಯಾಗಿರಲಿ, ಅರವಿಂದ ಕೇಜ್ರಿವಾಲ್ ಅವರು ಅಸಂಖ್ಯಾತ ವಿಷಯಗಳ ಬಗ್ಗೆ ಧೈರ್ಯದಿಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದರು.

ಪಕ್ಷದ ದೆಹಲಿ ಸಂಚಾಲಕ ಮತ್ತು ಪರಿಸರ ಸಚಿವ ಗೋಪಾಲ್ ರೈ ಅವರನ್ನು ಈ ಬಗ್ಗೆ ಕೇಳಿದಾಗ, ಎಎಪಿಯ ಪ್ರತಿಯೊಬ್ಬ ಸದಸ್ಯರು ಕೇಜ್ರಿವಾಲ್ ಅವರನ್ನು ಪ್ರಧಾನಿ ಹುದ್ದೆಗೆ ಬಯಸುತ್ತಾರೆ. ಆದರೆ ಅದರ ನಿರ್ಧಾರವನ್ನು ಇಂಡಿಯಾ ಬಣದ ಸದಸ್ಯರು ಮಾತ್ರ ಅಂತಿಮಗೊಳಿಸುತ್ತಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಕಾನೂನು ಸಚಿವ ‘ಭ್ರಷ್ಟಾಚಾರಿ ನಂ. 1’ ಎಂದ ಬಿಜೆಪಿ ಶಾಸಕ

“ಪ್ರತಿಯೊಂದು ಪಕ್ಷವೂ ತಮ್ಮ ನಾಯಕ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ. ಎಎಪಿ ಸದಸ್ಯರು ತಮ್ಮ ರಾಷ್ಟ್ರೀಯ ಸಂಚಾಲಕ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ. ಇಂಡಿಯಾ ಮೈತ್ರಿಕೂಟದ ಎಲ್ಲ ಸದಸ್ಯರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ಗೋಪಾಲ್ ರೈ ಅವರು ತಿಳಿಸಿದ್ದಾರೆ.

ನವದೆಹಲಿಯ ಸಂಪುಟ ಸಚಿವೆ ಅತಿಶಿ ಮರ್ಲೆನಾ, “ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಇಡೀ ದೇಶಕ್ಕೆ ಪ್ರಯೋಜನವಾಗುವಂತಹ ಮಾದರಿ ಆಡಳಿತವನ್ನು ನೀಡಿದ್ದಾರೆ. ಅದರೆ ಅವರು ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ಇಲ್ಲ. ಪ್ರಿಯಾಂಕಾ ಕಕ್ಕರ್ ಅವರ ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಎಎಪಿಯ ಹಿರಿಯ ನಾಯಕ ಮತ್ತು ಆಗಿನ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಕೇಜ್ರಿವಾಲ್ ಅವರನ್ನು ಪ್ರಧಾನಿಯಾಗಲು ಒತ್ತಾಯಿಸಿದ್ದರು. ‘ಕೇಜ್ರಿವಾಲ್‌ಗೆ ಒಂದು ಅವಕಾಶ’ ರಾಷ್ಟ್ರಮಟ್ಟದ ಚರ್ಚೆಯಾಗಿದೆ. ಜನರು 2024 ರಲ್ಲಿ ಮೋದಿಗೆ ಪರ್ಯಾಯವಾಗಿ ಕೇಜ್ರಿವಾಲ್ ಅವರನ್ನು ನೋಡಲು ಬಯಸುತ್ತಾರೆ. ಏಕೆಂದರೆ ಕೇಜ್ರಿವಾಲ್‌ ಅವರು ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗದ ಬಗ್ಗೆ ಮಾತನಾಡುತ್ತಾರೆ” ಎಂದು ತಿಳಿಸಿದ್ದರು.

ಪ್ರತಿಪಕ್ಷದ ‘ಇಂಡಿಯಾ’ ಒಕ್ಕೂಟದ ಮೂರನೇ ಸಭೆ ಮುಂಬೈನಲ್ಲಿ ಆಗಸ್ಟ್‌ 31 ಹಾಗೂ ಸೆ. 1 ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...