ಒಂದು ತಿಂಗಳಲ್ಲಿ 7 ಕೆಜಿ ತೂಕ ನಷ್ಟ: ಬಹಳ ಗಂಭೀರ ಸಮಸ್ಯೆ ಎಂದ ಕೇಜ್ರಿವಾಲ್

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ತಿಂಗಳ ಅವಧಿಯಲ್ಲಿಯೇ ಬರೋಬ್ಬರಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದು ತಮ್ಮ ತೂಕ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿದ್ದಾರೆ.

ಕೆಲವು ಗಂಭೀರ ವೈದ್ಯಕೀಯ ಸ್ಥಿತಿಯನ್ನು ಎದುರಿಸುತ್ತಿರುವ ಕಾರಣ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲು ಇನ್ನೂ ಏಳು ದಿನಗಳವರೆಗೆ ಮಧ್ಯಂತರ ಜಾಮೀನು ವಿಸ್ತರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

ಜೂನ್ 1ರವರೆಗೆ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ ಒಂದು ವಾರ ವಿಸ್ತರಣೆಗೆ ಕೋರಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಆರೋಗ್ಯ ಸಮಸ್ಯೆಯ ಪ್ರಸ್ತಾಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಧ್ಯಂತರ ಜಾಮೀನು 7 ದಿನ ವಿಸ್ತರಿಸಲು ಕೋರಿ ಸುಪ್ರೀಂಗೆ ಕೇಜ್ರಿವಾಲ್ ಅರ್ಜಿ

ಈ ಬಗ್ಗೆ ಬಟಿಂಡಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ನನ್ನ ತೂಕ ಭಾರೀ ಇಳಿಕೆಯಾಗಿದೆ. ಯಾವುದೇ ಕಾರಣವಿಲ್ಲದೆ ಒಬ್ಬ ವ್ಯಕ್ತಿಯ ತೂಕ ಒಂದು ತಿಂಗಳಲ್ಲಿ 7 ಕೆಜಿಯಷ್ಟು ಇಳಿಕೆಯಾದರೆ ಅದು ಅತೀ ಗಂಭೀರವಾದ ಸಮಸ್ಯೆ. ಆದ್ದರಿಂದ ವೈದ್ಯರು ಹಲವಾರು ಪರೀಕ್ಷೆಗಳನ್ನು ಸೂಚಿಸಿದ್ದಾರೆ” ಎಂದು ತಿಳಿಸಿದರು.

“ನನ್ನ ಆರೋಗ್ಯ ಸಮಸ್ಯೆಗೆ ಬೇಕಾದ ಎಲ್ಲಾ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ನಾನು ಏಳು ದಿನಗಳ ಕಾಲಾವಕಾಶವನ್ನು ಕೇಳಿದ್ದೇನೆ. ಎಲ್ಲಾ ಪರೀಕ್ಷೆಗಳನ್ನು ಮಾಡಿದರೆ, ಕನಿಷ್ಠ ಗಂಭೀರ ಕಾಯಿಲೆಯಾ ಇದೆಯೇ ಇಲ್ಲವೇ ಎಂಬುವುದಾದರೂ ನಮಗೆ ತಿಳಿಯುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ದೆಹಲಿ| ನನ್ನ ಮತ ಎಎಪಿಗೆ, ಕೇಜ್ರಿವಾಲ್ ವೋಟ್ ಕಾಂಗ್ರೆಸ್‌ಗೆ: ರಾಹುಲ್ ಗಾಂಧಿ

ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಮಾಡಿದ ಆರೋಪದಲ್ಲಿ ಅರವಿಂದ್ ಕೇಜ್ರಿವಾಲ್ ಅವರು 50 ದಿನಗಳ ಕಾಲ ಜೈಲಿನಲ್ಲಿದ್ದರು. ಮಾರ್ಚ್‌ 21ರಂದು ಬಂಧನಕ್ಕೆ ಒಳಗಾದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಜಾಮೀನು ನೀಡಿದ್ದು, ಮೇ 10ರಂದು ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ನಂತರ, ಕೇಜ್ರಿವಾಲ್ ಅವರು ಇಂಡಿಯಾ ಒಕ್ಕೂಟದ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...