‘ನೀವು ಎಷ್ಟು ದೌರ್ಜನ್ಯ ಮಾಡಿದರೂ ಅರವಿಂದ್ ಕೇಜ್ರಿವಾಲ್ ತಲೆಬಾಗಲ್ಲ’ ಎಂದ ಪಂಜಾಬ್ ಸಿಎಂ

Date:

ದೆಹಲಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಎಷ್ಟೇ ದೌರ್ಜನ್ಯ ಮಾಡಿರದೂ ಕೂಡಾ ಅವರು ತಲೆಬಾಗಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ಹೇಳಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ ಒಂದು ದಿನದ ಬಳಿಕ ಮಾನ್ ಈ ಹೇಳಿಕೆಯನ್ನು ನೀಡಿದ್ದಾರೆ. ಪಂಜಾಬ್ ಸಿಎಂ ಕೇಜ್ರಿವಾಲ್ ಅವರ ಚಿತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು ಕೇಜ್ರಿವಾಲ್ ತಲೆಬಾಗಲ್ಲ ಎಂದಿದ್ದಾರೆ.

“ಈ ಚಿತ್ರವು ಸರ್ವಾಧಿಕಾರದ ವಿರುದ್ಧದ ಹೋರಾಟವಾಗಿದೆ. ನೀವು ಎಷ್ಟೇ ದೌರ್ಜನ್ಯವನ್ನು ಮಾಡಿದರೂ ಕೂಡಾ ಅರವಿಂದ್ ಕೇಜ್ರಿವಾಲ್ ಅವರು ತಲೆಬಾಗಲ್ಲ” ಎಂದು ತನ್ನ ಎಕ್ಸ್ ಪೋಸ್ಟ್‌ನಲ್ಲಿ ಭಗವಂತ್ ಮಾನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಅಬಕಾರಿ ನೀತಿ ಪ್ರಕರಣ: ಮೂರು ದಿನ ಸಿಬಿಐ ಕಸ್ಟಡಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

“ಇಡಿ ನ್ಯಾಯಾಲಯದಿಂದ ಜಾಮೀನು ದೊರೆತ ಬಳಿಕ ಸಿಬಿಐ ಕೇಜ್ರಿವಾಲ್ ಅವರನ್ನು ಬಂಧನ ಮಾಡಿರುವುದು ಬಿಜೆಪಿಯ ಆಜ್ಞೆಯಂತೆ ಸಿಬಿಐ ನಡೆಯುತ್ತಿದೆ, ಸಿಬಿಐ ಅನ್ನು ದುರುಪಯೋಗ ಮಾಡಲಾಗುತ್ತಿದೆ ಎಂಬುವುದನ್ನು ಸ್ಪಷ್ಟಪಡಿಸುತ್ತದೆ” ಎಂದು ಅಭಿಪ್ರಾಯಿಸಿದರು.

“ನೀವು ಶಿಷ್ಟಾಚಾರ ಮತ್ತು ರಾಜಕೀಯವನ್ನು ಮರೆತುಬಿಡುವ ರೀತಿಯಿಂದಾಗಿ ನಿಮ್ಮ ಹೆಸರೂ ಕೂಡಾ ದಬ್ಬಾಳಿಕೆ ಮಾಡುವವರ ಪಟ್ಟಿಯಲ್ಲಿ ಬರೆಯಲ್ಪಡುತ್ತದೆ” ಎಂದು ಟೀಕಿಸಿದರು.

ಅಬಕಾರಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಜಾಮೀನು ಮಂಜೂರು ಮಾಡಿದೆ. ಆದರೆ ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಜಾಮೀನು ಆದೇಶ ತಡೆ: ಹೈಕೋರ್ಟ್ ಆದೇಶಕ್ಕೆ ಅಸಮ್ಮತಿ; ಸುಪ್ರೀಂ ಮೊರೆ ಹೋಗಲು ಎಎಪಿ ನಿರ್ಧಾರ

ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಸುಪ್ರೀಂ ಕೋರ್ಟ್ ಇದು ‘ಅಸಹಜ’ ಎಂದು ಹೇಳಿದೆ. ಹಾಗೆಯೇ ಈ ವಿಷಯದ ಕುರಿತು ಹೈಕೋರ್ಟ್‌ನ ಆದೇಶಕ್ಕಾಗಿ ಕಾಯಲು ಬಯಸುವುದಾಗಿ ಹೇಳಿದೆ.

ಮಂಗಳವಾರ ದೆಹಲಿ ಹೈಕೋರ್ಟ್ ತನ್ನ ಆದೇಶವನ್ನು ಪ್ರಕಟಿಸಿದ್ದು, ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ನೀಡಿದ ಜಾಮೀನು ಆದೇಶಕ್ಕೆ ತಡೆ ನೀಡಿದೆ. ಅದಾದ ಬಳಿಕ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮತ್ತೆ ಎಎಪಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬೆನ್ನಲ್ಲೇ ದೆಹಲಿ ಕೋರ್ಟ್ ಕೇಜ್ರಿವಾಲ್ ಅವರನ್ನು ಮೂರು ದಿನಗಳ ಸಿಬಿಐ ಕಸ್ಟಡಿಗೆ ಕಳುಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...