‘ಜೋಡು ಕರೆ’ಯನ್ನು ಉದ್ಘಾಟಿಸಿ ‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

Date:

ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದ ಜೋಡು ಕರೆಯನ್ನು ಉದ್ಘಾಟನೆ ಮಾಡುವ ಮೂಲಕ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಿದರು.

ವಿಶೇಷ ದೀಪ ಬೆಳಗಿಸುವ ಮೂಲಕ ‘ರಾಜ-ಮಹಾರಾಜ’ ಹೆಸರಿನಲ್ಲಿ ನಿರ್ಮಿಸಲಾಗಿರುವ ಕಂಬಳದ ಜೋಡು ಕರೆಯನ್ನು ಪುನೀತ್ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ದೀಪ ಬೆಳಗಿಸಿ, ಗಂಗಾರತಿ ಮಾಡಿ ಕರೆಯನ್ನು ಉದ್ಘಾಟನೆ ಮಾಡಿದರು.

ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುತ್ತಿದೆ. ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ, ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ರಕ್ಷಿತ್ ಶೆಟ್ಟಿ ಸೇರಿದಂತೆ ಹಲವು ಸಿನಿಮಾ ತಾರೆಯರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಗಣ್ಯರು ಭಾಗವಹಿಸಿ, ಮೆರುಗು ನೀಡಲಿದ್ದಾರೆ.

ಕಂಬಳ

ಸಾರ್ವಜನಿಕರಿಗೆ ಉಚಿತ ಪ್ರವೇಶ
ಕಂಬಳದ ಸಂಭ್ರಮದ ನಡುವೆ ಕೆಲವು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 200 ಜೋಡಿ ಕೋಣಗಳು ಸಜ್ಜಾಗಿವೆ.

ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಫನ್ ವರ್ಲ್ಡ್‌ ಕಡೆಯಿಂದ ಪ್ರತ್ಯೇಕ ಆಗಮನ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4ರಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರಲಿದೆ. ಪ್ರವೇಶ ಉಚಿತವಾಗಿರಲಿದೆ. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶ ಮಾಡಬಹುದು. ಆದರೆ ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕಂಬಳವನ್ನು ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು. ಎರಡು ದಿನದಲ್ಲಿ ಸುಮಾರು 6ರಿಂದ 7 ಲಕ್ಷ ಜನ ಬರುವ ನಿರೀಕ್ಷೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...