ಗಂಡ ಮದ್ಯಪಾನ ಬಿಡಬೇಕಾದರೆ ಮನೆಯಲ್ಲೆ ಕುಡಿಯಲು ಹೇಳಿ ಎಂದ ಮಧ್ಯಪ್ರದೇಶ ಸಚಿವ!

Date:

ನಿಮ್ಮ ಗಂಡ ಮದ್ಯಪಾನ ಮಾಡುವುದನ್ನು ನಿಲ್ಲಿಸಬೇಕು ಎಂದು ನೀವು ಬಯಸಿದರೆ ಗಂಡನಿಗೆ ಮನೆಯಲ್ಲೆ ಕುಡಿಯಲು ಹೇಳಿ ಎಂದು ಮಧ್ಯಪ್ರದೇಶದ ಸಚಿವ, ಬಿಜೆಪಿ ನಾಯಕ ಮಹಿಳೆಯರಿಗೆ ಸಲಹೆ ನೀಡಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಶುಕ್ರವಾರ ನಶಾ ಮುಕ್ತಿ (ವ್ಯಸನದಿಂದ ಮುಕ್ತಿ) ಅಭಿಯಾನದ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಸಾಮಾಜಿಕ ನ್ಯಾಯ ಸಚಿವ ನಾರಾಯಣ್ ಸಿಂಗ್ ಕುಶ್ವಾಹ್, “ಕುಟುಂಬಗಳ ಮಹಿಳಾ ಸದಸ್ಯರು ಈ ಅಭಿಯಾನದ ಯಶಸ್ಸಿನ ಕೀಲಿಯನ್ನು ಹೊಂದಿದ್ದಾರೆ” ಎಂದಿದ್ದಾರೆ.

“ಮಹಿಳೆಯರು ತಮ್ಮ ಗಂಡಂದಿರ ಬಳಿ ಹೊರಗೆ ಕುಡಿಯದಂತೆ ಮನೆಯಲ್ಲಿಯೆ ಮದ್ಯಪಾನ ಮಾಡಲು, ತಿನ್ನಲು ಹೇಳಬೇಕು. ಮಕ್ಕಳು ಮತ್ತು ಪತ್ನಿಯ ಎದುರು ಕುಡಿಯಲು ನಾಚಿಕೆಯಾಗುವ ಕಾರಣದಿಂದಾಗಿ ಕ್ರಮೇಣ ಮದ್ಯಪಾನ ಮಾಡುವುದು ಕಡಿಮೆಯಾಗುತ್ತದೆ” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಉಡುಪಿ | ಯಾವುದೇ ಚಟುವಟಿಕೆಯಿಲ್ಲದೆ ಮದ್ಯಪಾನಿಗಳ ತಾಣವಾದ ಗಾಂಧಿ ಭವನ

“ನಿಮ್ಮ ಕುಡಿತದ ಚಟ ಮಕ್ಕಳ ಮೇಲೂ ಅದೇ ಪರಿಣಾಮ ಬೀರುತ್ತದೆ ಎಂದು ನಿಮ್ಮ ಗಂಡಂದಿರಿಗೆ ಹೇಳಿ. ಗಂಡಸರಿಗೆ ಕುಟುಂಬದ ಎದುರು ಆಗುವ ಮುಜುಗರದಿಂದಾಗಿ ಅವರು ಕ್ರಮೇಣ ಕುಡಿಯುವ ಅಭ್ಯಾಸವನ್ನು ತೊರೆಯುತ್ತಾರೆ” ಎಂದು ಹೇಳಿದರು.

“ಪುರುಷರು ಮನೆಗೆ ಕುಡಿದು ಬಂದರೆ ಊಟ ನೀಡಬೇಡಿ. ಬದಲಿಗೆ ಲಟ್ಟಣಿಗೆ ತೋರಿಸಿ. ಮಹಿಳೆಯರು ಬಲವಾದ ಲಟ್ಟಣಿಗೆ ಗ್ಯಾಂಗ್ ಅನ್ನು ರಚಿಸಬೇಕು. ಇದು ಪುರುಷರಿಗೆ ಲಟ್ಟಣಿಗೆ ತೋರಿಸಿ ಕುಡಿತ ತೊರೆಯುವಂತೆ ಮಾಡುತ್ತದೆ” ಎಂದರು.

ಕುಶ್ವಾ ಅವರು ಗ್ವಾಲಿಯರ್ ಜಿಲ್ಲೆಯ ಗ್ವಾಲಿಯರ್ ದಕ್ಷಿಣ ಕ್ಷೇತ್ರದಿಂದ ಮೂರನೇ ಬಾರಿ ಬಿಜೆಪಿ ಶಾಸಕರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...