ಅಸ್ಸಾಂ | ಪ್ರಾದೇಶಿಕ ಮಂಡಳಿ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

Date:

ಅಸ್ಸಾಂನಲ್ಲಿ ನಡೆದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಪ್ರಾದೇಶಿಕ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಹಗ್ರಾಮಾ ಮೊಹಿಲರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಭರ್ಜರಿ ಗೆಲುವು ಸಾಧಿಸಿದೆದ. ಒಟ್ಟು 40 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಬಿಪಿಎಫ್‌ ಗೆದ್ದಿದ್ದರೆ, ಬಿಜೆಪಿ ಕೇವಲ 5 ಸ್ಥಾನಗಳನ್ನು ಮಾತ್ರವೇ ಗೆದ್ದಿದೆ.

ಬಿಟಿಸಿ – ಅಸ್ಸಾಂ ರಾಜ್ಯದಲ್ಲಿ ಬೋಡೋ ಜನರಿಗಾಗಿ ಸ್ಥಾಪಿತ ಸ್ವಾಯತ್ತ ಆಡಳಿತ ಸಂಸ್ಥೆಯಾಗಿದೆ. ಈ ಸಂಸ್ಥೆಯು ಅಸ್ಸಾಂನ ಕೊಕರಾಝಾರ್, ಚಿರಾಂಗ್, ಬಕ್ಸಾ ಹಾಗೂ ಉದಾಲ್ಗುರಿ ಜಿಲ್ಲೆಗಳಲ್ಲಿ ಬೋಟೋ ಜನರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ.ಬಿಟಿಸಿ ಒಟ್ಟು 46 ಸ್ಥಾನಗಳನ್ನು ಹೊಂದಿದ್ದು, 40 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಉಳಿದ 6 ಸದಸ್ಯರನ್ನು ರಾಜ್ಯ ಸರ್ಕಾರವು ನಾಮನಿರ್ದೇಶನ ಮಾಡುತ್ತದೆ.

ಈ ಬಾರಿಯ ಚುನಾವಣೆಯಲ್ಲಿ, ಬಿಟಿಸಿ ಆಡಳಿತದಲ್ಲಿದ್ದ ಬಿಜೆಪಿ ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಮೈತ್ರಿಕೂಟವು ಹೀನಾಯ ಸೋಲು ಕಂಡಿದೆ. ಯುಪಿಪಿಎಲ್ ಪಕ್ಷವು 7 ಸ್ಥಾನಗಳು ಮತ್ತು ಬಿಜೆಪಿ 5 ಸ್ಥಾನಗಳನ್ನು ಮಾತ್ರವೇ ಗೆದ್ದಿವೆ. ಬಿಪಿಎಫ್‌ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಯಲ್ಲಿ ನಿರ್ಗಮಿತ ಬಿಟಿಸಿ ಮುಖ್ಯಸ್ಥ ಪ್ರಮೋದ್ ಬೊರೊ ಅವರು ಗೋಯಿಮರಿ ಮತ್ತು ಡೋಟ್ಮಾ – ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ, ಗೋಯಿಮರಿ ಕ್ಷೇತ್ರದಲ್ಲಿ ಗೆದ್ದಿರುವ ಅವರು, ಡೋಡ್ಮಾದಲ್ಲಿ ಸೋಲು ಕಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರದ ಭೂಮಿ ಲೂಟಿ: ಅದಾನಿ ಸಾಮ್ರಾಜ್ಯದ ವಿಸ್ತರಣೆಯಲ್ಲಿ ಮೋದಿ ಸರ್ಕಾರದ ನೇರ ಪಾತ್ರ

2020ರ ಚುನಾವಣೆಯಲ್ಲಿ ಬಿಪಿಎಫ್ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯುಪಿಪಿಎಲ್ 12 ಸ್ಥಾನಗಳನ್ನು ಗೆದ್ದಿತು, ಬಿಜೆಪಿ 9 ಮತ್ತು ಗಣ ಸುರಕ್ಷಾ ಪಕ್ಷ (ಜಿಎಸ್‌ಪಿ) 1 ಹಾಗೂ ಕಾಂಗ್ರೆಸ್‌ 1 ಸ್ಥಾನಗಳನ್ನು ಗೆದ್ದಿತು. ಆದಾಗ್ಯೂ ಯುಪಿಪಿಎಲ್, ಬಿಜೆಪಿ ಹಾಗೂ ಜಿಎಸ್‌ಪಿ ಮೈತ್ರಿ ಮಾಡಿಕೊಂಡು ಮಂಡಳಿಯಲ್ಲಿ ಆಡಳಿತ ಸ್ಥಾಪಿಸಿದ್ದವು. ಕಾಂಗ್ರೆಸ್‌ನ ಏಕೈಕ ಸದಸ್ಯ ಕೂಡ ಬಿಜೆಪಿ ಸೇರಿಕೊಂಡಿದ್ದರು.

ಬಿಪಿಎಫ್ ಕೂಡ ಕೇಂದ್ರ ಸರ್ಕಾರದಲ್ಲಿ ಎನ್‌ಡಿಎಯ ಭಾಗವಾಗಿದೆ. ಆದರೆ, ಅಸ್ಸಾಂ ಪ್ರಾದೇಶಿಕ ಚುನಾವಣೆಗಳಲ್ಲಿ ಬಿಜೆಪಿಯ ಸಖ್ಯದಿಂದ ಹೊರಗುಳಿದಿದೆ.

ಬಿಟಿಸಿಗೆ ಸೆಪ್ಟೆಂಬರ್ 22ರಂದು ಚುನಾವಣೆ ನಡೆದಿತ್ತು. 13,34,600 ಮಹಿಳೆಯರು, 13,23,536 ಪುರುಷರು ಹಾಗೂ 17 ಮಂದಿ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 26,58,153 ಮತದಾರರಲ್ಲಿ 78% ಜನರು ಮತ ಚಲಾಯಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...