ಕಾಂಗ್ರೆಸ್‌ ನಾಯಕರ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

Date:

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಹಾಗೂ ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಶರ್ಮಾ ವಿರುದ್ಧ ಕಾಂಗ್ರೆಸ್‌ ನಾಯಕರು ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ, ಶರ್ಮಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸ್ ದೂರನ್ನೂ ಕಾಂಗ್ರೆಸ್‌ ದಾಖಲಿಸಿದೆ. ಈ ಬೆನ್ನಲ್ಲೇ, ಮೂವರು ಕಾಂಗ್ರೆಸ್‌ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಶರ್ಮಾ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿಸಿರುವ ಸಿಎಂ ಶರ್ಮಾ, “ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಹಾಗೂ ಮಾನನಷ್ಟ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಹಾಗೂ ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು-ಮೂರು ದಿನಗಳ ಹಿಂದೆ, ಶರ್ಮಾ ಅವರು ಮುಸ್ಲಿಮರಿಗೆ ರೈಫಲ್‌ ಗುರಿಯಿಟ್ಟಿರುವ ಎಐ ರಚಿತ ವಿಡಿಯೋವನ್ನು ಅಸ್ಸಾಂ ಬಿಜೆಪಿ ಹಂಚಿಕೊಂಡಿತ್ತು. ಇದು, ಕೋಮು ನರಮೇಧಕ್ಕೆ ಕರೆಕೊಡುವಂತಿದೆ ಎಂದು ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಅಳಿಸಿಹಾಕಿದೆ. ಆ ವಿಡಿಯೋ ಕಾರಣಕ್ಕಾಗಿ, ಕಾಂಗ್ರೆಸ್ ಶಾಸಕರಾದ ಸಿಬಮೋನಿ ಬೋರಾ ಮತ್ತು ದಿಗಂತ ಬರ್ಮನ್ ಅವರು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...