ರಾಹುಲ್‌ ಗಾಂಧಿಯಿಂದ ‘ನ್ಯಾಯ’ದ ನಿರೀಕ್ಷೆಯಲ್ಲಿ ಅಸ್ಸಾಂ ಕಾಂಗ್ರೆಸ್‌ನಿಂದ ಅಮಾನತಾದ ನಾಯಕಿ

Date:

ರಾಹುಲ್‌ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಅಸ್ಸಾಂ ತಲುಪಿದೆ. ಈ ವೇಳೆ, ಅಸ್ಸಾಂ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನ್ಯಾಯ ಮತ್ತು ನ್ಯಾಯದ ಚರ್ಚೆಗಾಗಿ ರಾಹುಲ್‌ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.

ಯಾತ್ರೆಯ ಮಾರ್ಗದಲ್ಲಿ ಶಿವಸಾಗರ ಜಿಲ್ಲೆಯ ಅಮ್ಗುರಿಯಲ್ಲಿ ಅಂಗಿತಾ ದತ್ತಾ ಅವರ ನೇತೃತ್ವದಲ್ಲಿ ಧರಣಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ ಬಳಿಕ ತಮ್ಮನ್ನು 2023ರ ಏಪ್ರಿಲ್‌ನಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ನಮಗೆ ನ್ಯಾಯ ಬೇಕೆಂದು ಆಕೆ ಧರಣಿ ನಡೆಸಿದ್ದಾರೆ.

“ನಾನು ನ್ಯಾಯವನ್ನು ಪಡೆಯಲು ಇಲ್ಲಿಗೆ ಬಂದಿದ್ದೇನೆ. ರಾಹುಲ್‌ ಗಾಂಧಿ ಅವರು ತಮ್ಮ ನ್ಯಾಯ ಯಾತ್ರೆಯನ್ನು ಪ್ರಾರಂಭಿಸಿದಾಗ ನನಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಮತ್ತು ಪಕ್ಷದ ಸದಸ್ಯತ್ವಕ್ಕಾಗಿ ನಾನು ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸುತ್ತೇನೆ” ಎಂದು ದತ್ತಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ರಾಹುಲ್‌ ಗಾಂಧಿ ಅವರ ಬೆಂಗಾವಲು ಪಡೆ ರಾಹುಲ್‌ ಸುತ್ತ ಇದ್ದಿದ್ದರಿಂದ ಅವರನ್ನು ಭೇಟಿ ಮಾಡಲು ಆಕೆಗೆ ಅವಕಾಶ ಸಿಗಲಿಲ್ಲ ಎಂದು ಆಕೆಯ ಬೆಂಬಲಿಗರು ಹೇಳಿದ್ದಾರೆ. “ನನ್ನ ಅಮಾನತಿನ ನಂತರ ಈ 10 ತಿಂಗಳಲ್ಲಿ ನಾನು ಯಾವುದೇ ರಾಜಕೀಯ ಪಕ್ಷವನ್ನು ಸೇರಲಿಲ್ಲ. ಆದರೆ ಈ ದೇಶದ ಜನರಿಗೆ ನ್ಯಾಯವನ್ನು ಕೇಳಲು ಹೊರಟ ನಾಯಕನಿಂದ ನನಗೆ ಯಾವುದೇ ನ್ಯಾಯ ಸಿಗಲಿಲ್ಲ” ಎಂದು ದತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದತ್ತಾ ಬೆಂಬಲಿಗರು ಯಾತ್ರೆಯ ಮಾರ್ಗದುದ್ದಕ್ಕೂ ‘ಅಸ್ಸಾಂ ಮಗಳಿಗೆ ನ್ಯಾಯ ಬೇಕು’ ಎಂಬ ಪೋಸ್ಟರ್‌ಗಳನ್ನು ಹಾಕಿದ್ದರು. ದತ್ತಾ ಅವರ ಧರಣಿ ಬಗ್ಗೆ ಪಕ್ಷದ ರಾಜ್ಯ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿಳಿದಿತ್ತು ಎಂದು ದತ್ತಾ ಬೆಂಬಲಿಗರು ಹೇಳಿದ್ದಾರೆ.

ದತ್ತಾ ಅವರ ಮನವಿ ಪಡೆಯಲಾಗದ ರಾಹುಲ್‌ ಗಾಂಧಿಯನ್ನು ಬಿಜೆಪಿ ಟೀಕಿಸಿದೆ. “ನ್ಯಾಯ ಎಲ್ಲರಿಗೂ ಸಿಗಬೇಕು. ಲೈಂಗಿಕ ಕಿರುಕುಳದ ಪ್ರಕರಣಗಳಲ್ಲಿ ಪಕ್ಷವು ತಮ್ಮ ಮಾರ್ಗಸೂಚಿಗಳಿಗೆ ಬದ್ಧವಾಗಿರಬೇಕು. ನ್ಯಾಯಕ್ಕಾಗಿ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ಸದಸ್ಯರಿಗೆ ಯಾಕೆ ನ್ಯಾಯ ಕೊಡಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಬಿಜೆಪಿ ನಾಯಕ ನಳಿನ್ ಕೊಹ್ಲಿ ಹೇಳಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...