ಲೋಕಸಭೆಯ ಜೊತೆಜೊತೆಗೇ ನಡೆಯಲಿದೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ

Date:

ಇಂದು ಚುನಾವಣಾ ಆಯೋಗವು ಲೋಕಸಭೆ ಚುನಾವಣೆ ದಿನಾಂಕ ಘೋಷಿಸುವುದರ ಜೊತೆಗೆಯೇ ನಾಲ್ಕು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಈ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂಧ್ರ ಪ್ರದೇಶ ವಿಧಾನಸಭೆಯ 175 ಮೇ 13ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಎಲ್ಲವೂ ಒಂದೇ ಹಂತದಲ್ಲಿ ನಡೆಯಲಿದೆ.

ಶನಿವಾರದಂದು ಭಾರತೀಯ ಚುನಾವಣಾ ಆಯೋಗವು ಘೋಷಿಸಿದ ಪೂರ್ಣ ವೇಳಾಪಟ್ಟಿ ಮತ್ತು ದಿನಾಂಕಗಳ ಪ್ರಕಾರ ಮೇ 13, 2024 ರಂದು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲಿದೆ.

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆಯ ಫಲಿತಾಂಶವು  ಲೋಕಸಭೆಯ ಜೊತೆಗೆ ಪ್ರಕಟವಾಗಲಿದೆ.

ಸಿಕ್ಕಿಂ ಅಸೆಂಬ್ಲಿ ಚುನಾವಣೆ

ಸಿಕ್ಕಿಂ ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ಆರಂಭವಾಗಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಪ್ರಸ್ತುತ ಸರ್ಕಾರದ ಅಧಿಕಾರಾವಧಿಯು ಜೂನ್ 2 ರಂದು ಕೊನೆಗೊಳ್ಳಲಿದೆ.

ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ

ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಅರುಣಾಚಲ ಪ್ರದೇಶದ ಶಾಸಕಾಂಗ ಸಭೆಯು 60 ಸದಸ್ಯರನ್ನು ಹೊಂದಿದೆ. 2019ರ ಏಪ್ರಿಲ್‌ನಲ್ಲಿ ನಡೆದ ಕೊನೆಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು.

ಒಡಿಶಾ ವಿಧಾನಸಭೆ ಚುನಾವಣೆ

147 ಸದಸ್ಯ ಬಲದ ಒಡಿಶಾ ವಿಧಾನಸಭೆಗೆ ನಾಲ್ಕು ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಆಯೋಗದ ಪ್ರಕಟಣೆಯಂತೆ ಮತದಾರರು ಮೇ 13, ಮೇ 20, ಮೇ 25, ಜೂನ್ 1 ರಂದು ನಾಲ್ಕು ದಿನಾಂಕಗಳಲ್ಲಿ ಮತ ಚಲಾಯಿಸಲಿದ್ದಾರೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

2019 ರಲ್ಲಿ ಚುನಾಯಿತವಾಗಿರುವ ಪ್ರಸ್ತುತ ವಿಧಾನಸಭೆಯ ಅವಧಿಯು ಜೂನ್ 2, 2024 ರಂದು ಮುಕ್ತಾಯಗೊಳ್ಳಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...