ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

Date:

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್‌ ಅಧಿಕಾರಿಗಳು ಹಾಗೂ ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ತಮ್ಮ ಕೊಲೆಗೆ ಜಗನ್ ಮತ್ತು ಇಬ್ಬರು ಅಧಿಕಾರಿಗಳಾದ ಪಿವಿ ಸುನೀಲ್ ಕುಮಾರ್ ಮತ್ತು ಪಿಎಸ್ ಆರ್ ಸೀತಾರಾಮಾಂಜನೇಯುಲು ಸಂಚು ರೂಪಿಸುತ್ತಿದ್ದಾರೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕೆ ರಘುರಾಮ ಕೃಷ್ಣರಾಜು ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳನ್ನು ನಿವೃತ್ತ ಪೊಲೀಸ್ ಅಧಿಕಾರಿ ಆರ್ ವಿಜಯ್ ಪಾಲ್ ಮತ್ತು ಮಾಜಿ ಗುಂಟೂರು ಸರ್ಕಾರಿ ಜನರಲ್ ಆಸ್ಪತ್ರೆ ಅಧೀಕ್ಷಕ ಜಿ ಪ್ರಭಾವತ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸಕ ರಾಜು ಅವರು ಒಂದು ತಿಂಗಳ ಹಿಂದೆ ಪೊಲೀಸರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಕಾನೂನು ಅಭಿಪ್ರಾಯವನ್ನು ಪಡೆದ ನಂತರ ನಾವು ಮಾಜಿ ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಗುರುವಾರ ಸಂಜೆ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಶಾಸಕ ರಾಜು ಅವರು ಮುರು ವರ್ಷಗಳ ಹಿಂದೆ ‘ಪೊಲೀಸ್ ಕಸ್ಟಡಿ ದೌರ್ಜನ್ಯ’ಕ್ಕೆ ಒಳಗಾಗಿದ್ದೇನೆ ಎಂದು ಆರೋಪಿಸಿದ್ದಾರೆ. ಪ್ರಕರಣದ ಎಲ್ಲ ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ 2021ರಲ್ಲಿ ತಮ್ಮನ್ನು ಪೊಲೀಸರು ಬಂಧಿಸಿದ್ದರು. ಠಾಣೆಯಲ್ಲಿ ದೌರ್ಜನ್ಯ ಎಸಗಿದರು. ಮಾಜಿ ಮುಖ್ಯಮಂತ್ರಿ ಜಗನ್ ರೆಡ್ಡಿ ಮತ್ತು ಅಧಿಕಾರಿಗಳು ತಮ್ಮ ವಿರುದ್ಧ ಕ್ರಿಮಿನಲ್ ‘ಪಿತೂರಿ’ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಆಂಧ್ರಪ್ರದೇಶ ಸರ್ಕಾರದ ಸಿಬಿ-ಸಿಐಡಿ ನನ್ನ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿದೆ. 2021ರ ಮೇ 14ರಂದು ಯಾವುದೇ ನೋಟಿಸ್‌ ನೀಡದೆ ನನ್ನನ್ನು ಬಂಧಿಸಿ, ಬೆದರಿಸಲಾಯಿತು. ಕಾನೂನುಬಾಹಿರವಾಗಿ ನನ್ನನ್ನು ಪೊಲೀಸ್ ವಾಹನದಲ್ಲಿ ಎಳೆದೊಯ್ದು, ಗುಂಟೂರಿಗೆ ಕರೆದೊಯ್ಯಲಾಯಿತು ಆಗ ಕುಮಾರ್ ಅವರು ಸಿಐಡಿ ಮುಖ್ಯಸ್ಥರಾಗಿದ್ದರು. ಸೀತಾರಾಮಾಂಜನೇಯುಲು ಗುಪ್ತಚರ ವಿಭಾಗದ ಮುಖ್ಯಸ್ಥರಾಗಿದ್ದರು. ಪಾಲ್ ಅವರು ಸಿಐಡಿಯ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು ಮತ್ತು ರೆಡ್ಡಿ ಮುಖ್ಯಮಂತ್ರಿಯಾಗಿದ್ದರು” ಎಂದು ಶಾಸಕ ರಾಜು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...