ಮುಖ್ಯಮಂತ್ರಿ ಪದಕ ಪ್ರದಾನ | ಅರಣ್ಯ ಒತ್ತುವರಿ ಕಟ್ಟು ನಿಟ್ಟಾಗಿ ತಡೆಯಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

Date:

ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾ ಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದರು. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.

ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು.

“ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ. ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. “ಪ್ರಕೃತಿ ಮನುಷ್ಯನ‌ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ” ಎಂದು ಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಬೇಕು” ಎಂದು ಸೂಚಿಸಿದರು.

“ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ. ವನ್ಯಜೀವಿ ಮತ್ತು ಅರಣ್ಯ ಸಂಪತ್ತು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಆಫ್ರಿಕಾ ಬಿಟ್ಟರೆ ಅತಿ ಹೆಚ್ಚು ಅರಣ್ಯ ಪ್ರಾಣಿ ಸಂಪತ್ತು ಇರುವುದು ಭಾರತದಲ್ಲೇ. ಹಾಗೆಯೇ ಅರಣ್ಯದ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ” ಎಂದು ಹೇಳಿದರು.

ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...